ಬೆಂಗಳೂರು : ಇನ್ಮುಂದೆ ದಿನದ 24 ಗಂಟೆಯೂ ಹೋಟೆಲ್ ಗಳನ್ನು ಓಪನ್ ಮಾಡಲು ರಾಜ್ಯ ಸರ್ಕಾರ ಅನುಮತಿ ನೀಡುವ ಸಾಧ್ಯತೆಗಳಿದೆ .ದಿನದ 24 ಗಂಟೆ ಹೋಟೆಲ್ ಓಪನ್ ಮಾಡೋದಕ್ಕೆ ಸರ್ಕಾರ ಅನುಮತಿ ನೀಡುವ ಭರವಸೆ ನೀಡಿದ್ದು, ಶೀಘ್ರದಲ್ಲೇ ಮಾರ್ಗಸೂಚಿ ಕೂಡ ಬಿಡುಗಡೆಯಾಗುವ ಸಾಧ್ಯತೆಯಿದೆ.
ಹೋಟೆಲ್ ಗಳನ್ನ ದಿನದ 24 ಗಂಟೆಗಳ ಕಾಲ ತೆರೆಯಲು ಅನುಮತಿ ನೀಡುವಂತೆ ಹೋಟೆಲ್ ಅಸೋಸಿಯೇಷನ್ ಸರ್ಕಾರದ ಮುಂದೆ ಬೇಡಿಕೆ ಇಡುತ್ತಲೇ ಬಂದಿದ್ದು, ಈ ಬಾರಿ ಕಾಂಗ್ರೆಸ್ ಸರ್ಕಾರ ಇವರ ಬೇಡಿಕೆಯನ್ನ ಈಡೇರಿಸಲು ಮುಂದಾಗಿದ್ದು, ಇದಕ್ಕೆ ಅನುಮತಿ ನೀಡುವ ಭರವಸೆಯನ್ನು ಸರ್ಕಾರ ನೀಡಿದೆ.
ದಿನದ 24 ಗಂಟೆಯೂ ಹೋಟೆಲ್ ಗಳನ್ನು ಓಪನ್ ಮಾಡುವ ಬಗ್ಗೆ ಕೆಲವೇ ದಿನಗಳಲ್ಲಿ ಸರ್ಕಾರ ಮಾರ್ಗಸೂಚಿಯನ್ನ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಕೇರಳದಲ್ಲಿ ದಿನದ 24 ಗಂಟೆಗಳ ಕಾಲ ಹೋಟೆಲ್ ತೆರೆಯಲು ಅನುಮತಿ ಇದ್ದು, ಅದರಂತೆ ಬೆಂಗಳೂರಿನಲ್ಲಿ ಅನುಮತಿ ಸಿಗುವ ನಿರೀಕ್ಷೆಯಿದೆ ಎಂದು ಹೋಟೆಲ್ ಮಾಲೀಕರು ಹೇಳಿದ್ದಾರೆ.
ಸರ್ಕಾರ ಇದಕ್ಕೆ ಅನುಮತಿ ನೀಡಿದರೆ ರಾತ್ರಿ ಪಾಳಿಯಲ್ಲಿ ಕರ್ತವ್ಯಕ್ಕೆ ಹೋಗುವವರಿಗೆ, ರಾತ್ರಿ ವೇಳೆ ಪ್ರಯಾಣ ಮಾಡುವವರಿಗೆ ಒಳ್ಳೆಯದಾಗುತ್ತದೆ. ಹಾಗೂ ಬೆಂಗಳೂರಿನಲ್ಲಿ ಹೆಚ್ಚು ಉದ್ಯೋಗ ಕೂಡ ಸೃಷ್ಟಿಯಾಗುತ್ತದೆ ಎಂಬುದು ಹೋಟೆಲ್ ಮಾಲೀಕರ ಮಾತಾಗಿದೆ.