ಬೆಂಗಳೂರು : ಬೆಂಗಳೂರಿಗರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಶೀಘ್ರದಲ್ಲೇ ಹೊಸದಾಗಿ 50 ಇಂದಿರಾ ಕ್ಯಾಂಟೀನ್ ಸ್ಥಾಪನೆ ಮಾಡುವುದಾಗಿ ಬಿಬಿಎಂಪಿ ಬಜೆಟ್ ನಲ್ಲಿ ಘೋಷಣೆ ಮಾಡಲಾಗಿದೆ.
2024-25ನೇ ಸಾಲಿನ ಬೆಂಗಳೂರು ಮಹಾನಗರ ಪಾಲಿಕೆ-ಬಿಬಿಎಂಪಿ ಬಜೆಟ್ ಮಂಡನೆಯಾಗಿದ್ದು, . ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯಡಿಯಲ್ಲಿ ಹಲವಾರು ಮಹತ್ವದ ಘೋಷಣೆ ಮಾಡಲಾಗಿದೆ. ಬಿಬಿಎಂಪಿ ವಿಶೇಷ ಆಯುಕ್ತ ಶಿವಾನಂದ ಕಲ್ಕೆರಿ ಟೌನ್ ಹಾಲ್ ನಲ್ಲಿ ಬಿಬಿಎಂಪಿ ಬಜೆಟ್ ಮಂಡನೆ ಮಾಡಿದರು.
ಬೆಂಗಳೂರಿನಲ್ಲಿ ಹೊಸದಾಗಿ 50 ಇಂದಿರಾ ಕ್ಯಾಂಟೀನ್ ಸ್ಥಾಪನೆ, ಮೊಬೈಲ್ ಕ್ಯಾಂಟೀನ್ ಸ್ಥಾಪಿಸಲು 70 ಕೋಟಿ ರೂ. ಮೀಸಲು ಇಡುವುದಾಗಿ ಬಜೆಟ್ ನಲ್ಲಿ ಘೋಷಣೆ ಮಾಡಲಾಗಿದೆ.
ಬಿಬಿಎಂಪಿ ವಿಶೇಷ ಆಯುಕ್ತ ಶಿವಾನಂದ ಕಲ್ಕೆರಿ ಟೌನ್ ಹಾಲ್ ನಲ್ಲಿ ಬಿಬಿಎಂಪಿ ಬಜೆಟ್ ಮಂಡನೆ ಮಾಡಿದರು. ಬೆಂಗಳೂರಿನ 100 ಕಡೆಗಳಲ್ಲಿ ಮಹಿಳೆಯರಿಗಾಗಿ ಶಿ ಟಾಯ್ಲೆಟ್ ನಿರ್ಮಾಣ ಮಾಡಲಾಗುವುದು ಎಂದು ಘೋಷಿಸಿದರು. ಬಿಬಿಎಂಪಿ ಬಜೆಟ್ ನಲ್ಲಿ ಬ್ರ್ಯಾಂಡ್ ಬೆಂಗಳೂರು ಸೇರಿದಂತೆ ಹಲವು ಯೋಜನೆಗಳಿಗೆ ಅನುದಾನ ಮೀಸಲಿಡಲಾಗಿದೆ