ಬೆಂಗಳೂರು : ಹೊಸ ವರ್ಷಾಚರಣೆ ಹಿನ್ನೆಲೆ ಬೆಂಗಳೂರಿನಲ್ಲಿ ಮಧ್ಯರಾತ್ರಿ 2 ಗಂಟೆವರೆಗೂ ಬಿಎಂಟಿಸಿ ಬಸ್ ಸಂಚಾರ ವಿಸ್ತರಣೆ ಮಾಡಲಾಗಿದೆ.
ಎಂಜಿ ರೋಡ್, ಬ್ರಿಗೇಡ್ ರೋಡ್ ಸೇರಿದಂತೆ ಹಲವು ಏರಿಯಾಗಳಿಗೆ ಬಿಎಂಟಿಸಿ ಮಧ್ಯರಾತ್ರಿ 2 ಗಂಟೆವರೆಗೂ ಬಸ್ ಬಿಡಲಿದೆ. ಹೊಸ ವರ್ಷದ ಪಾರ್ಟಿ ಮುಗಿಸಿಕೊಂಡು ಸಾರ್ವಜನಿಕರು ಆರಾಮಾಗಿ 2 ಗಂಟೆವರೆಗೂ ಬಿಎಂಟಿಸಿ ಬಸ್ ಸಂಚಾರದ ಪ್ರಯೋಜನ ಪಡೆಯಬಹುದು. ಇದರ ಜೊತೆಗೆ ಮಧ್ಯರಾತ್ರಿ 2 ಗಂಟೆವರೆಗೂ ನಮ್ಮ ಮೆಟ್ರೋ ಸಂಚಾರ ವಿಸ್ತರಣೆ ಮಾಡಲಾಗಿದೆ.
ಇಂದು ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಯ ಸಂಭ್ರಮ ಮನೆ ಮಾಡಿದೆ. ಬೆಂಗಳೂರಿನಲ್ಲಿ ಇಂದು ಟ್ರಾಫಿಕ್ ಜಾಮ್ ಆಗುವ ಸಾಧ್ಯತೆಯಿದ್ದು, ಸಂಚಾರಿ ಪೊಲೀಸರು ಕೆಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಿದ್ದಾರೆ.