ಬೆಂಗಳೂರು : ರಾಜ್ಯ ಸರ್ಕಾರವು ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಯೋಜನೆ ಫಲಾನುಭವಿಗಳಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಯೂಟಿಗಳ ಮಿತಿಯನ್ನು 18 ರಿಂದ 40 ಕ್ಕೆ ಹೆಚ್ಚಳ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಗೃಹಜ್ಯೋತಿ ಜಾರಿ ಬಳಿಕ ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಅಮೃತ ಜ್ಯೋತಿ ಸೇರಿಸಿ 58 ಯೂನಿಟ್ ಗಳ ವರೆಗೆ ಉಚಿತ ವಿದ್ಯುತ್ ನೀಡಲು ತೀರ್ಮಾನಿಸಲಾಗಿದೆ. ಈ ಯೋಜನೆಗಳಡಿ ಉಳಿದಿದ್ದ 389.66 ಕೋಟಿ ರೂ. ಮೊತ್ತವನ್ನು ಒಂದು ಬಾರಿ ಮನ್ನಾ ಮಾಡಲಾಗಿದೆ ಎಂದು ಹೇಳಿದ್ದಾರೆ.
ಇನ್ನು ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಜ್ಯೂನಿಯರ್ ಕಾಲೇಜುಗಳಿಗೆ ವಿದ್ಯುತ್, ನೀರಿನ ವೆಚ್ಚ ಭರಿಸಲೂ ತೀರ್ಮಾನಿಸಲಾಗಿದೆ. ಕೃಷಿ ಪಂಪ್ ಸೆಟ್ ಗಳಿಗೆ 7 ಗಂಟೆ ವಿದ್ಯುತ್ ಒದಗಿಸಲು ನಿತ್ಯ 14 ದಶಲಕ್ಷ ಯೂನಿಟ್ ಅಗತ್ಯವಿದೆ ಎಂದು ತಿಳಿಸಿದ್ದಾರೆ.