ಭೋವಿ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ವತಿಯಿಂದ 2023-24ನೇ ಸಾಲಿಗೆ ಪರಿಶಿಷ್ಟ ಜಾತಿ ಭೋವಿ ಜನಾಂಗದ ನಿರುದ್ಯೋಗಿ ಫಲಾಪೇಕ್ಷಗಳಿಗೆ ಸ್ವಯಂ ಉದ್ಯೋಗ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ, ಮೈಕ್ರೋ ಕ್ರೆಡಿಟ್ ಪ್ರೇರಣಾ ಯೋಜನೆ, ಗಂಗಾ ಕಲ್ಯಾಣ ಯೋಜನೆಗಳಡಿಯಲ್ಲಿ ಸಾಲ / ಸಹಾಯಧನ ಒದಗಿಸಲು ಆನ್ ಲೈನ್ ಮೂಲಕ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಫಲಾಪೇಕ್ಷಿಗಳು ಅರ್ಜಿಗಳನ್ನು ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಡಿಸೆಂಬರ್ 15 ರೊಳಗೆ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಬೆಂಗಳೂರು ನಗರ ಜಿಲ್ಲೆ, ನಂ.29/19 ರಾಜಾಜಿನಗರ, 1 ನೇ ಬ್ಲಾಕ್, 12ನೇ ಮೈನ್ ನವರಂಗ್ ಥಿಯೇಟರ್ ಮುಂಭಾಗ, ನಳಪಾಕ ಹೋಟೆಲ್ ಹತ್ತಿರ, ಬೆಂಗಳೂರು-10 ಅಥವಾ ದೂರವಾಣಿ ಸಂಖ್ಯೆ: 080-23421533 ಅನ್ನು ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲಾ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read