
ಪ್ರಯಾಣಿಕರಿಗೆ ಬಿಎಂಟಿಸಿ ಗುಡ್ ನ್ಯೂಸ್ ನೀಡಿದೆ. ರಾತ್ರಿ ಸೇವೆ ಸಾರಿಗೆಗಳಿಗೂ ಸಹ ಸಾಮಾನ್ಯ ಸೇವೆಗಳ ಪ್ರಯಾಣ ದರವನ್ನೇ ನಿಗದಿಗೊಳಿಸಲಾಗಿದ್ದು, ಈ ಕುರಿತ ಆದೇಶ ಹೊರ ಬಿದ್ದಿದೆ.
ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರು ಈ ಆದೇಶ ಹೊರಡಿಸಿದ್ದು, ಬುಧವಾರದಿಂದಲೇ ಇದು ಜಾರಿಗೆ ಬಂದಿದೆ ಎಂದು ತಿಳಿಸಲಾಗಿದೆ.
ತಡರಾತ್ರಿ ಹಾಗೂ ಮುಂಜಾನೆ ಪ್ರಯಾಣಿಸುವ ಪ್ರಯಾಣಿಕರ ಅನುಕೂಲಕ್ಕಾಗಿಯೂ ಬಿಎಂಟಿಸಿ ಸಾರಿಗೆ ಸೇವೆ ನೀಡುತ್ತಿದ್ದು, ಇದೀಗ ಸಾಮಾನ್ಯ ಸಾರಿಗೆಗಳಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಸಾಮಾನ್ಯ ಸೇವೆಗಳ ಪ್ರಯಾಣ ದರವನ್ನೇ ನಿಗದಿಗೊಳಿಸಲಾಗಿದ್ದು, ಏಕರೂಪದ ಪ್ರಯಾಣ ದರ ಸ್ವೀಕರಿಸಲಾಗುತ್ತದೆ.