ಬೆಂಗಳೂರು : ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಆಯುಷ್ಮಾನ್ ಭಾರತ್– ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್‌ಗಳಿಗೆ ಹೊಸ ರೂಪ ನೀಡಿದೆ.
ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್‌ಗಳನ್ನು, ಆಯುಷ್ಮಾನ್ ಭಾರತ್ – ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ” ಎಂದು ಮರುನಾಮಕರಣ ಮಾಡಲಾಗಿದೆ.
ಮುಂದಿನ 6 ತಿಂಗಳಲ್ಲಿ ರಾಜ್ಯದ 5.09 ಕೋಟಿ ಜನರಿಗೆ ಹೆಲ್ತ್ ಕಾರ್ಡ್ ವಿತರಿಸುವ ಗುರಿಯನ್ನ ಹೊಂದಲಾಗಿದೆ. ರಾಜ್ಯದ ಬಿಪಿಎಲ್ ಕಾರ್ಡುದಾರರು ₹5 ಲಕ್ಷ ಹಾಗೂ APL ಕಾರ್ಡುದಾರರಿಗೆ ಗರಿಷ್ಠ ₹1.50 ಲಕ್ಷ ಮೌಲ್ಯದ ಚಿಕಿತ್ಸಾ ವೆಚ್ಚವನ್ನ ಸರ್ಕಾರ ಭರಿಸಲಿದೆ. ಇದರೊಂದಿಗೆ ದೇಶದ ಇತರ ರಾಜ್ಯಗಳ ಆಸ್ಪತ್ರೆಗಳಲ್ಲೂ ಹೆಚ್ಚಿನ ಚಿಕಿತ್ಸೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.