ಬೆಂಗಳೂರು : ರಾಜ್ಯ ಸರ್ಕಾರವು ಬ್ರಾಹ್ಮಣ ಸಮುದಾಯದವರಿಗೆ ಸಿಹಿಸುದ್ದಿ ನೀಡಿದ್ದು, ಸ್ವಾವಲಂಬಿ ಯೋಜನೆಯಡಿ 5 ಲಕ್ಷ ರೂ.ವರೆಗೆ ಸರ್ಕಾರಿ ಸಹಾಯಧನ ನೀಡಲಾಗುತ್ತಿದೆ.
ಈ ಕುರಿತು ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದ್ದು, ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಕುಟುಂಬಗಳ ಶ್ರೇಯೋಭಿವೃದ್ಧಿಗಾಗಿ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ ಸ್ವಯಂ ಉದ್ಯೋಗಿ ಬ್ರಾಹ್ಮಣರಿಗೆ 5 ಲಕ್ಷ ರೂ.ವರೆಗೆ ಸರ್ಕಾರಿ ಸಹಾಯಧನ ನೀಡಲಾಗುತ್ತಿದೆ. ಜೊತೆಗೆ ಸ್ವಾವಲಂಬಿ ಮತ್ತು ಸಾಂದೀಪಿನಿ ಶಿಷ್ಯ ವೇತನದ ಯೋಜನೆಗಳ ಉಪಯೋಗವನ್ನು ಅರ್ಹರು ಪಡೆದುಕೊಳ್ಳಿ ಎಂದು ತಿಳಿಸಿದ್ದಾರೆ.
ವ್ಯಾಪಾರ, ಅಂಗಡಿ, ಹೈನುಗಾರಿಕೆ, ಹೊಲಿಗೆ ವೃತ್ತಿ, ಆಟಿಕೆ ತಯಾರಿಕೆ, ಮೊಬೈಲ್ ಅಂಗಡಿ, ಗುಡಿ ಕೈಗಾರಿಕೆ ಸೇರಿದಂತೆ ಹೆಚ್ಚಿನ ಘಟಕ ವೆಚ್ಚವಿರುವ ಆದಾಯ ಬರುವಂತಹ ಲಾಭದಾಯಕ ಉದ್ಯಮಗಳನ್ನು ಸ್ಥಾಪಿಸಲು ರಾಷ್ತ್ರೀಕೃತ ಬ್ಯಾಂಕ್ ಗಳಿಂದ ಸಾಲ ಪಡೆದವರು ಈ ಯೋಜನೆ ಅರ್ಹರಾಗಿರುತ್ತಾರೆ. ಜನವರಿ 31 ರ ವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.