ಬೆಂಗಳೂರು : ರಾಜ್ಯದಲ್ಲಿ ಬಸ್ ಪ್ರಯಾಣ ದರ ಏರಿಕೆಯ ಆತಂಕದಲ್ಲಿ ಜನಸಾಮನ್ಯರಿಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ನೆಮ್ಮದಿಯ ಸುದ್ದಿ ನೀಡಿದ್ದು, ಸದ್ಯಕ್ಕೆ ಬಸ್ ಪ್ರಯಾಣ ದರ ಏರಿಸುವ ಪ್ರಸ್ತಾವ ಇಲ್ಲ ಎಂದು ಹೇಳಿದ್ದರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಸ್ ಪ್ರಯಾಣ ದರ ಏರಿಕೆ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಹೇಳಿದ್ದಾರೆ. ಈ ಮೂಲಕ ಬಸ್ ಟಿಕೆಟ್ ದರ ಏರಿಕೆಯಲ್ಲಿದ್ದ ಪ್ರಯಾಣಿಕರಿಗೆ ನೆಮ್ಮದಿಯ ಸುದ್ದಿ ಸಿಕ್ಕಿದೆ.
ರಾಜ್ಯದಲ್ಲಿರುವ 25 ಸಾವಿರ ಹಳ್ಳಿಗಳ ಪೈಕಿ 300 ರಿಂದ 400 ಗ್ರಾಮಗಳನ್ನು ಹೊರತುಪಡಿಸಿ ಉಳಿದೆಲ್ಲ ಕಡೆ ಬಸ್ ಸೇವೆ ಒದಗಿಸಲಾಗುತ್ತದೆ. ನಷ್ಟವಾದ್ರೂ ಕೂಡ ಜನರಿಗೆ ಸೇವೆ ನೀಡಬೇಕು ಎಂಬ ಕಾರಣಕ್ಕೆ ಸರ್ಕಾರ ಸಾರಿಗೆ ಸಂಸ್ಥೆಗಳ ಬಸ್ ಸಂಚಾರ ಮುಂದುವರೆಸುತ್ತದೆ ಎಂದು ಹೇಳಿದ್ದಾರೆ.