ಬೆಳಗಾವಿ : ಕೆಪಿಟಿಸಿಎಲ್ ನೇಮಕಾತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ನೇಮಕಾತಿ ಆದೇಶ ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ, ಜಾರ್ಜ್ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಸಚಿವ ಕೆ.ಜೆ. ಜಾರ್ಜ್, ನೇಮಕಾತಿ ಸಂಬಂಧ ಹಲವರು ಕೋರ್ಟ್ ಗೆ ಹೋಗಿದ್ದರು. ಈಗಾಗಲೇ ಕೋರ್ಟ್ ಇವುಗಳನ್ನು ವಜಾ ಮಾಡಿದೆ. ಈಗ ಕೆಪಿಟಿಸಿಎಲ್ ನೇಮಕಾತಿ ಆದೇಶ ಸಂಬಂಧ ಸಭೆ ನಡೆಸಲಾಗಿದ್ದು, ಇನ್ನೊಂದು ತಿಂಗಳೊಳಗೆ ಪಟ್ಟಿ ಘೋಷಣೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಈ ಮೂಲಕ ಕೆಪಿಟಿಸಿಎಲ್ ನೇಮಕಾತಿ ಸಂಬಂಧ ಪರೀಕ್ಷೆ ಬರೆದು ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಸಿಹಿಸುದ್ದಿ ನೀಡಿದ್ದಾರೆ.