ನವದೆಹಲಿ: ಕೇಂದ್ರ ನೌಕರರು ಮತ್ತು ಪಿಂಚಣಿದಾರರ ತುಟ್ಟಿಭತ್ಯೆಯನ್ನು(ಡಿಎ) 4% ಹೆಚ್ಚಿಸಲು ಭಾರತ ಸರ್ಕಾರ ಘೋಷಿಸಿದೆ.
ಇದು ಜನವರಿ 1, 2023 ರಿಂದ ಅನ್ವಯವಾಗುವಂತೆ ಜಾರಿಗೆ ಬರಲಿದೆ. 47.58 ಲಕ್ಷ ಉದ್ಯೋಗಿಗಳು ಮತ್ತು 69.76 ಲಕ್ಷ ಪಿಂಚಣಿದಾರರಿಗೆ ಪ್ರಯೋಜನ ಆಗಲಿದೆ. ತುಟ್ಟಿಭತ್ಯೆಯ ಹೆಚ್ಚುವರಿ ಕಂತಿನ ಬಿಡುಗಡೆಗೆ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ 01.01.2023 ರಿಂದ ಜಾರಿಗೆ ಬರುವಂತೆ ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆಯ ಹೆಚ್ಚುವರಿ ಕಂತಿನ ಬಿಡುಗಡೆಗೆ ಅನುಮೋದನೆ ನೀಡಿದೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.
ಹೆಚ್ಚುವರಿ ಕಂತು ಮೂಲ ವೇತನ/ಪಿಂಚಣಿಯ ಅಸ್ತಿತ್ವದಲ್ಲಿರುವ 38% ದರಕ್ಕಿಂತ 4% ಹೆಚ್ಚಳವನ್ನು ಪ್ರತಿನಿಧಿಸುತ್ತದೆ ಎಂದು ಅದು ಹೇಳಿದೆ. ಒಟ್ಟು ತುಟ್ಟಿ ಭತ್ಯೆ ಈಗ ಶೇಕಡಾ 42 ರಷ್ಟಿದೆ. ಡಿಎ ಹೆಚ್ಚಳದಿಂದ ಬೊಕ್ಕಸದ ಮೇಲೆ ವಾರ್ಷಿಕ 12,815.60 ಕೋಟಿ ರೂ. ಹೊರೆಯಾಗಲಿದೆ.