alex Certify ರಾಜ್ಯದ 8 ನೇ ತರಗತಿ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಉಚಿತ ಸೈಕಲ್ ವಿತರಣೆಗೆ ಸಿಎಂ ಗ್ರೀನ್ ಸಿಗ್ನಲ್! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ 8 ನೇ ತರಗತಿ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಉಚಿತ ಸೈಕಲ್ ವಿತರಣೆಗೆ ಸಿಎಂ ಗ್ರೀನ್ ಸಿಗ್ನಲ್!

ಬೆಂಗಳೂರು : ರಾಜ್ಯದ 8ನೇ ತರಗತಿ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಸೈಕಲ್ ವಿತರಣೆ ಬಗ್ಗೆ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ರಾಜ್ಯದಲ್ಲಿ 2006-07ರಲ್ಲಿ ಆರಂಭಗೊಂಡ ಉಚಿತ ಸೈಕಲ್ ವಿತರಣೆ ಯೋಜನೆ ಪುನರ್ ಆರಂಭಿಸುವ ಬಗ್ಗೆ ಸಿಎಂ ಸುಳಿವು ನೀಡಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಹಲವು ವರ್ಷಗಳಿಂದ ಸೈಕಲ್ ವಿತರಣೆ ಯೋಜನೆ ಸ್ಥಗಿತಗೊಂಡಿದೆ. ಈ ಯೋಜನೆ ಪುನಾರಂಭಿಸುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದರು. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಸೆಳೆಯುವ ನಿಟ್ಟಿನಲ್ಲಿ ಹಾಗೂ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಜಾರಿಗೆ ತಂದ ಉಚಿತ ಬೈಸಿಕಲ್ ವಿತರಣೆ ಯೋಜನೆಯನ್ನು ಜಾರಿಗೆ ತರುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದರು.

ರಾಜ್ಯದಲ್ಲಿ 2006-07ರಲ್ಲಿ ಆರಂಭಗೊಂಡ ಉಚಿತ ಸೈಕಲ್ ವಿತರಣೆ ಯೋಜನೆ ಸ್ಥಗಿತದಿಂದಾಗಿ ಗ್ರಾಮೀಣ ಭಾಗದ ಮಕ್ಕಳಿಗೆ ಬಹಳ ತೊಂದರೆಯಾಗಿತ್ತು. ಸೈಕಲ್ ವಿತರಣೆ ಯೋಜನೆಯನ್ನು ಮುಂದುವರಿಸಬೇಕು ಎಂಬ ಒತ್ತಾಯ ಕೇಳಿಬಂದಿದ್ದು, ಈ ನಿಟ್ಟಿನಲ್ಲಿ ಸರ್ಕಾರ ಚಿಂತನೆ ನಡೆಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...