ಬೆಂಗಳೂರು : ಕೊಬ್ಬರಿ ಬೆಳೆಗಾರರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಬೆಂಬಲ ಬೆಲೆ 1500 ರೂ ಹೆಚ್ಚಳ ಮಾಡಿದೆ.
ಈ ಬಗ್ಗೆ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ ರಾಜ್ಯ ಸರ್ಕಾರವು ಕೊಬ್ಬರಿ ಬೆಳೆಗಾರರ ನೆರವಿಗೆ ಧಾವಿಸಿದೆ. ಈಗಾಗಲೇ ಕೇಂದ್ರ ಸರ್ಕಾರವು ಕೊಬ್ಬರಿ ಬೆಳೆಗಾರರಿಗೆ ನೀಡುತ್ತಿರುವ ಕನಿಷ್ಠ ಬೆಂಬಲ ಬೆಲೆ 12,000 ರೂ.ಗಳೊಂದಿಗೆ 1500 ರೂ. ಗಳನ್ನು ಹೆಚ್ಚುವರಿಯಾಗಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇದು ಕೊಬ್ಬರಿ ಬೆಳಗಾರರ ಸಂತಸಕ್ಕೆ ಕಾರಣವಾಗಿದೆ ಎಂದಿದ್ದಾರೆ.
ಕೇಂದ್ರ ಸರ್ಕಾರವು ಪ್ರತಿ ಕ್ವಿಂಟಾಲ್ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಯನ್ನು 300 ರೂಪಾಯಿ ಹೆಚ್ಚಿಸಿ ಡಿಸೆಂಬರ್ ತಿಂಗಳಾಂತ್ಯದಲ್ಲಿ ಆದೇಶಿಸಿತ್ತು. ಅಲ್ಲದೆ, ಉಂಡೆ ಕೊಬ್ಬರಿಗೆ 250 ರೂ. ಹೆಚ್ಚಿಸಿತ್ತು.