alex Certify ಕ್ರಿಕೆಟ್ ಪ್ರೇಮಿಗಳಿಗೆ ಗುಡ್ ನ್ಯೂಸ್ : ನಾಳೆ ಮಧ್ಯರಾತ್ರಿ 11:45ರ ವರೆಗೂ ‘ನಮ್ಮ ಮೆಟ್ರೋ’ ಸೇವೆ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ರಿಕೆಟ್ ಪ್ರೇಮಿಗಳಿಗೆ ಗುಡ್ ನ್ಯೂಸ್ : ನಾಳೆ ಮಧ್ಯರಾತ್ರಿ 11:45ರ ವರೆಗೂ ‘ನಮ್ಮ ಮೆಟ್ರೋ’ ಸೇವೆ ವಿಸ್ತರಣೆ

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ಭಾರತ-ಆಸ್ಟ್ರೇಲಿಯಾ ನಡುವಿನ ಟಿ 20 ಸರಣಿಯ ಕೊನೆಯ ಪಂದ್ಯ ನಡೆಯಲಿದ್ದು, ಈ ಹಿನ್ನೆಲೆ ಪಂದ್ಯ ನೋಡುವ ಪ್ರೇಕ್ಷಕರಿಗಾಗಿ ನಮ್ಮ ಮೆಟ್ರೋ ಸೇವೆ ವಿಸ್ತರಿಸಿದೆ.

ನೇರಳೆ ಹಾಗೂ ಹಸಿರು ಮಾರ್ಗಗಳ 4 ಟರ್ಮಿನಲ್ ಮೆಟ್ರೋ ನಿಲ್ದಾಣದಿಂದ ಹೊರಡುವ ರೈಲು ರಾತ್ರಿ 11 :45 ರವರೆಗೆ ಇರಲಿದೆ ಎಂದು ಪ್ರಕಟಣೆ ತಿಳಿಸಿದೆ.ಪೇಪರ್ ಟಿಕೆಟ್ ಗಳು ರಾತ್ರಿ 8 ಗಂಟೆಯಿಂದ ಕಬ್ಬನ್ ಪಾರ್ಕ್ ಹಾಗೂ ಎಂಜಿ ರೋಡ್ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ದಿನದ ಒಂದು ಪ್ರಯಾಣಕ್ಕೆ ಸೀಮಿತವಾಗಿರಲಿದೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ಭಾರತ-ಆಸ್ಟ್ರೇಲಿಯಾ ನಡುವಿನ ಟಿ 20 ಸರಣಿಯ ಕೊನೆಯ ಪಂದ್ಯ ನಡೆಯಲಿದ್ದು, ಬಹಳ ಕುತೂಹಲ ಮೂಡಿಸಿದೆ. ವಿಶ್ವಕಪ್ ಗೆದ್ದ ಬೇಸರದಲ್ಲಿರುವ ಅಭಿಮಾನಿಗಳಿಗೆ ಈ ಪಂದ್ಯ ಖುಷಿ ತರಿಸುತ್ತಾ ಎಂಬುದನ್ನು ಕಾದು ನೋಡಬೇಕಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...