ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯದ ವಿವಿಧ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ದಿನಗೂಲಿ ನೌಕರರ ವೇತನ ಮತ್ತು ಹೊರಗುತ್ತಿಗೆ ಸಿಬ್ಬಂದಿಗಳ ವೇತನ ಪಾವತಿಗಾಗಿ 17.58 ಕೋಟಿ ರೂ. ಬಿಡುಗಡೆ ಮಾಡಿದೆ.
ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ದಿನಗೂಲಿ ನೌಕರರು ಮತ್ತು ಹೊರಗುತ್ತಿಗೆ ಸಿಬ್ಬಂದಿಗಳ ಸಂಭಾವನೆಗೆ ಅಗತ್ಯವಿರುವ 2ನೇ ಕಂತಿನ ಅನುದಾನವನ್ನು ಹಣಕಾಸು ಇಲಾಖೆ ಬಿಡುಗಡೆ ಮಾಡಿದೆ.
ಜಿಲ್ಲಾ ಪಂಚಾಯಿತಿ ಕಾರ್ಯಕ್ರಮದಡಿ ಎರಡನೇ ಕಂತಿನ ಅನುದಾನ 830.63 ಲಕ್ಷ ರೂ.ಗಳನ್ನು ಹಾಗೂ ತಾಲೂಕು ಪಂಚಾಯಿತಿ ಕಾರ್ಯಕ್ರಮದಡಿ 927.93 ಲಕ್ಷ ಸೇರಿ 1758.56 ಲಕ್ಷ ರೂ. ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.