alex Certify ವಿಕಲಚೇತನರಿಗೆ ಗುಡ್ ನ್ಯೂಸ್ : ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಕಲಚೇತನರಿಗೆ ಗುಡ್ ನ್ಯೂಸ್ : ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಕೊಪ್ಪಳ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2023-24ನೇ ಸಾಲಿಗೆ ಇಲಾಖೆಯಿಂದ ಟಾಕಿಂಗ್ ಲ್ಯಾಪ್‌ಟಾಪ್, ಬ್ರೈಲ್‌ಕಿಟ್, ಹೊಲಿಗೆಯಂತ್ರ, ಸಾಧನ ಸಲಕರಣೆ ಹಾಗೂ ಶುಲ್ಕ ಮರುಪಾವತಿ ಯೋಜನೆಗೆ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.

ಎಸ್.ಎಸ್.ಎಲ್.ಸಿ ಹಾಗೂ ನಂತರದ ತರಗತಿಗಳಲ್ಲಿ ಓದುತ್ತಿರುವ ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್ ಮತ್ತು ಬ್ರೈಲ್‌ಕಿಟ್, ಶ್ರವಣದೋಷವುಳ್ಳ ವಿಕಲಚೇತನರಿಗೆ ಹೊಲಿಗೆಯಂತ್ರ, ಎಸ್.ಎಸ್.ಎಲ್.ಸಿ ನಂತರದ ಉನ್ನತ ವ್ಯಾಸಂಗ ಮಾಡುತ್ತಿರುವ ವಿಕಲಚೇತನರಿಗೆ ಶುಲ್ಕ ಮರುಪಾವತಿ ಹಾಗೂ ವಿಕಲಚೇತನರಿಗೆ ವಿವಿಧ ರೀತಿಯ ಸಾಧನ ಸಲಕರಣೆಗಳಿಗೆ ಸೌಲಭ್ಯ ಒದಗಿಸಲಾಗುತ್ತಿದೆ.

ಆಸಕ್ತರ ಅರ್ಹ ವಿಕಲಚೇತನ ಅಭ್ಯರ್ಥಿಗಳು ಅರ್ಜಿಯನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ನಗರಾಭಿವೃದ್ಧಿ ಪ್ರಾಧಿಕಾರ ಕಾರ್ಯಾಲಯ ಆವರಣ ಕೊಠಡಿ ಸಂಖ್ಯೆ 31,32 ರಿಲಾಯನ್ಸ್ ಪೆಟ್ರೋಲ್ ಬಂಕ್ ಎದುರುಗಡೆ ಹೊಸಪೇಟೆ ರಸ್ತೆ ಕೊಪ್ಪಳ ಇವರಿಗೆ ಸೆಪ್ಟೆಂಬರ್ 22ರೊಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೊನೆಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ತಾಲೂಕು ಎಂ.ಆರ್.ಡಬ್ಲ್ಯೂ.ಗಳಾದ ಕೊಪ್ಪಳದ ಜಯಶ್ರೀ ಮೊ.ಸಂ: 9980126391, ಯಲಬುರ್ಗಾದ ಬಸನಗೌಡ ಮೊ.ಸಂ: 9964803047, ಕುಷ್ಟಗಿಯ ಚಂದ್ರಶೇಕರ ಮೊ.ಸಂ: 9916308585, ಗಂಗಾವತಿಯ ಮಂಜುಳಾ ಮೊ.ಸಂ: 7975398202 ಹಾಗೂ ವಿಕಲಚೇತನರ ಮಾಹಿತಿ ಸಲಹಾ ಕೇಂದ್ರದ ದೂರವಾಣಿ ಸಂಖ್ಯೆ 08539-200460ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕ¯ರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...