alex Certify ರಾಜ್ಯದ ವಿಕಲಚೇತನರಿಗೆ ಗುಡ್ ನ್ಯೂಸ್ : ಒಂದೇ ಬಾರಿಗೆ `ದ್ವಿಚಕ್ರ’ ವಾಹನ ವಿತರಣೆ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ವಿಕಲಚೇತನರಿಗೆ ಗುಡ್ ನ್ಯೂಸ್ : ಒಂದೇ ಬಾರಿಗೆ `ದ್ವಿಚಕ್ರ’ ವಾಹನ ವಿತರಣೆ!

ಬೆಳಗಾವಿ : ರಾಜ್ಯದ ವಿಕಲಚೇತನರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಎಲ್ಲ ವಿಕಲಚೇತನರಿಗೆ ಒಂದೇ ಬಾರಿಗೆ ದ್ವಿಚಕ್ರ ವಾಹನ ನೀಡಲು ತೀರ್ಮಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿರುವ ಎಲ್ಲ ವಿಕಲಚೇತನರಿಗೆ ಅವರ ಅಗತ್ಯತೆ ಆಧರಿಸಿ ಒಂದು ಬಾರಿಗೆ ದ್ವಿಚಕ್ರ ವಾಹನ ನೀಡಲು ತೀರ್ಮಾನಿಸಲಾಗಿದೆ. ಆದ್ದರಿಂದ ಅರ್ಹ ವ್ಯಕ್ತಿಗಳ ಮಾಹಿತಿಯನ್ನು ಸಂಗ್ರಹಿಸಬೇಕು. ಹೆಸ್ಕಾಂ ನಿರ್ಲಕ್ಷ್ಯ ದಿಂದ ವಿದ್ಯುತ್ ತಂತಿ ತಗುಲಿ ಮರಣ ಹೊಂದಿರುವವರಿಗೆ ಕೂಡಲೇ ಪರಿಹಾರವನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಸಚಿವರು ತಿಳಿಸಿದರು.

ಬಾಡಿಗೆ ಕಟ್ಟಡಗಳಲ್ಲಿರುವ ಅಂಗನವಾಡಿ ಕೇಂದ್ರಗಳನ್ನು ಸಾಧ್ಯವಿದ್ದಷ್ಟು ಶಾಲಾ ಆವರಣದಲ್ಲಿ ಅಂಗನವಾಡಿ ಕೇಂದ್ರ ನಿರ್ಮಿಸಲು ಆದ್ಯತೆ ನೀಡಬೇಕು. ಈ ರೀತಿ ಮಾಡುವುದರಿಂದ ಅಂಗನವಾಡಿ ಮಕ್ಕಳು ಮುಂದೆ ಅದೇ ಶಾಲೆಗೆ ಪ್ರವೇಶ ಪಡೆಯಲು ಅನುಕೂಲವಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ಗೃಹಲಕ್ಷ್ಮೀ ಯೋಜನೆ; ಫಲಾನುಭವಿಗಳ ನೋಂದಣಿಗೆ ಸೂಚನೆ:

ಗೃಹಲಕ್ಷ್ಮೀ ಯೋಜನೆಗೆ 17 ಸಾವಿರ ಕೋಟಿ ರೂಪಾಯಿ ಅನುದಾನ ಒದಗಿಸಲಾಗಿದೆ. ಜುಲೈ 20 ರಿಂದ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ.

ನೋಂದಣಿ ಪ್ರಕ್ರಿಯೆ ಹಾಗೂ ನೋಂದಾಯಿತ ಫಲಾನುಭವಿಗಳ ಸಂಖ್ಯೆ ಮತ್ತಿತರ ವಿಷಯಗಳನ್ನು ಸ್ಥಳೀಯ ಶಾಸಕರ ಗಮನಕ್ಕೆ ತರಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ತಹಶೀಲ್ದಾರರಿಗೆ ಸೂಚನೆ ನೀಡಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...