ಬೆಂಗಳುರು : ರಾಜ್ಯ ಸರ್ಕಾರದ 5ನೇ ಗ್ಯಾರಂಟಿ ಯೋಜನೆ ಯುವನಿಧಿ 2024ರ ಜನವರಿಯಲ್ಲಿ ಆರಂಭಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ, 2022-23ನೇ ಸಾಲಿನಲ್ಲಿ ಪದವಿ ಪಡೆದ ನಿರುದ್ಯೋಗಿ ಯುವಜನರಿಗೆ 2 ವರ್ಷಗಳ ವರೆಗೆ ತಿಂಗಳಿಗೆ 3 3,000 ಹಾಗೂ ಡಿಪ್ಲೊಮಾ ಮಾಡಿದವರಿಗೆ 2 ವರ್ಷಗಳ ವರೆಗೆ ತಿಂಗಳಿಗೆ 1,500 ನೀಡಲಾಗುವುದು. ಇದಲ್ಲದೇ ಯುವಜನರಿಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನೂ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜ್ಯ ಸರ್ಕಾರವು ಈಗಾಗಲೇ ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಜನವರಿಯಲ್ಲಿ ಯುವನಿಧಿ ಜಾರಿಗೆ ಸರ್ಕಾರ ಸಿದ್ಧತೆ ನಡೆಸಿದೆ.