alex Certify ಡಿಪ್ಲೋಮಾ, ಪದವೀಧರರಿಗೆ ಗುಡ್ ನ್ಯೂಸ್ : `ಯುವನಿಧಿ’ ಯೋಜನೆ ಜಾರಿ ಬಗ್ಗೆ ಸಿಎಂ ಮಹತ್ವದ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿಪ್ಲೋಮಾ, ಪದವೀಧರರಿಗೆ ಗುಡ್ ನ್ಯೂಸ್ : `ಯುವನಿಧಿ’ ಯೋಜನೆ ಜಾರಿ ಬಗ್ಗೆ ಸಿಎಂ ಮಹತ್ವದ ಘೋಷಣೆ

ಬೆಂಗಳೂರು ; ಬೆಂಗಳೂರಿನ ಮಾಣೆಕ್ ಶಾ ಪರೇಡ್ ಮೈದಾನದಲ್ಲಿ ಅದ್ಧೂರಿಯಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡಲಾಗುತ್ತಿದ್ದು, ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಧ್ವಜಾರೋಹಣದ ಬಳಿಕ ರಾಜ್ಯದ ಜನತೆಯನ್ನುದ್ದೇಶಿಸಿ ಮಾತನಾಡುತ್ತಿದ್ದು, ರಾಜ್ಯದ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದ್ದು, ಜನರಿಗೆ ನಾವು 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ದೇಶದ ಅಭಿವೃದ್ಧಿ ದೃಷ್ಟಿಯಲ್ಲಿಟ್ಟುಕೊಂಡು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದರು.

ಪದವಿ, ಡಿಪ್ಲೊಮಾ ಪಡೆದ ಯುವಕರಿಗೆ ಯುವನಿಧಿ ಯೋಜನೆ ಜಾರಿಗೆ ತರಲಾಗಿದ್ದು, ಶಿಕ್ಷಣ ಪಡೆದು ಆರು ತಿಂಗಳಾದರೂ ಉದ್ಯೋಗ ದೊರೆಯದ ಯುವಜನರಿಗೆ ಉದ್ಯೋಗ ದೊರೆಯುವವರೆಗೆ ಅಥವಾ ಗರಿಷ್ಠ ಎರಡು ವರ್ಷದವರೆಗೆ, ಪದವೀಧರರಿಗೆ 3000 ರೂ. ಹಾಗೂ ಡಿಪ್ಲೊಮಾ ಪಡೆದವರಿಗೆ 1500 ರೂ. ನಿರುದ್ಯೋಗ ಭತ್ಯೆ ನೀಡಲಾಗುವುದು. 2022-23ರ ಶೈಕ್ಷಣಿಕ ವರ್ಷ ಅಂತ್ಯಗೊಂಡ 6 ತಿಂಗಳ ನಂತರ ಈ ಯೋಜನೆ ಜಾರಿಯಾಗಲಿದೆ ಎಂದು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...