ಬಳ್ಳಾರಿ : ರಾಜ್ಯ ಸರ್ಕಾರವು ಡಿಪ್ಲೋಮಾ, ಪದವೀಧರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 5 ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಡಿಸೆಂಬರ್ ನಲ್ಲಿ ಚಾಲನೆ ನೀಡಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ್ ಆರ್. ಪಾಟೀಲ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಡಿದ ಅವರು, ಯುವನಿಧಿ ಯೋಜನೆಯನ್ನು ಡಿಸೆಂಬರ್ ನಿಂದ ಪ್ರಾರಂಭಿಸಲು ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಯೋಜನೆಗೆ 250 ಕೋಟಿ ರೂ. ಅನುದಾನ ನಿಗದಿಪಡಿಸಲಾಗಿದೆ. ಡಿಸೆಂಬರ್ ನಿಂದ ರಾಜ್ಯದ ಡಿಪ್ಲೋಮಾ, ಪದವೀಧರರಿಗೆ ನಿರುದ್ಯೋಗ ಭತ್ಯೆಯಂತೆ ಡಿಪ್ಲೋಮಾ ಮಾಡಿದವರಿಗೆ 1,500 ರೂ. ಪದವೀಧರರಿಗೆ 3,000 ರೂ. ಯುವನಿಧಿ ಯೋಜನೆಯಡಿ ನೀಡಲಾಗುತ್ತದೆ ಎಂದು ಹೇಳಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಉದ್ಯೋಗವನ್ನು ಭದ್ರಪಡಿಸಿಕೊಳ್ಳಲು ಮತ್ತು ಕಾರ್ಮಿಕ ಮಾರುಕಟ್ಟೆಯಲ್ಲಿ ನ್ಯಾವಿಗೇಟ್ ಮಾಡಲು, ಯುವತಿಯರು ಮತ್ತು ಪುರುಷರಿಗೆ ನಿರ್ದಿಷ್ಟ ಕಾರ್ಯಗಳನ್ನು ನಿರ್ವಹಿಸಲು ತಾಂತ್ರಿಕ ಕೌಶಲ್ಯಗಳು ಮತ್ತು ಮೃದು ಕೌಶಲ್ಯಗಳು ಅವಶ್ಯವಾಗಿವೆ ಎಂದು ಅಭಿಪ್ರಾಯಪಟ್ಟರು.
ಇಂದಿನ ಯುವಕರಿಗೆ ಪ್ರಸ್ತುತ ಬೇಡಿಕೆಯಲ್ಲಿ ಉದಯೋನ್ಮುಖ ಪ್ರವೃತ್ತಿಗಳು ಮತ್ತು ವಿಷಯಗಳನ್ನು ಬೆಂಬಲಿಸಲು ಅಗತ್ಯವಿರುವ ಕೌಶಲ್ಯಗಳನ್ನು ನೀಡುವುದು ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರಗಳಲ್ಲಿ ತರಬೇತಿ ಕಾರ್ಯಾಗಾರ ಹಾಗೂ ಸಂವಹನದ ಕೌಶಲ್ಯತೆ ಹೆಚ್ಚಿಸಬೇಕು ಎಂದು ಕೈಗಾರಿಕಾ ತರಬೇತಿ ಕೇಂದ್ರಗಳ ಪ್ರಾಚಾರ್ಯರಿಗೆ ಸೂಚಿಸಿದರು.