ಬೆಂಗಳೂರು : ರಾಜ್ಯ ಪಠ್ಯಕ್ರಮ ವ್ಯಾಸಂಗ ಮಾಡುತ್ತಿರುವ 1 ರಿಂದ 9 ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಪರೀಕ್ಷೆಯಿಂದ ವಿನಾಯಿತಿ ನೀಡಿ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ.
ವಿಶೇಷ ಅಗತ್ಯವುಳ್ಳ ವಿದ್ಯಾರ್ಥಿಗಳಿಗೆ ಪರೀಕ್ಷಾ ವಿನಾಯತಿ, ಪರೀಕ್ಷೆಯಲ್ಲಿ ಸುಧಾರಣೆಗಳು, ರಿಯಾಯತಿ/ವಿನಾಯತಿ ಸೌಲಭ್ಯಗಳನ್ನು ಒದಗಿಸುವ ಕುರಿತು ರಾಜ್ಯ ಯೋಜನಾ ನಿರ್ದೇಶಕರು, ಸಮಗ್ರ ಶಿಕ್ಷಣ ಕರ್ನಾಟಕ ರವರ ಅಧ್ಯಕ್ಷತೆಯಲ್ಲಿ ದಿನಾಂಕ: 13/07/2022ರಂದು ನಡೆದ ಸಭೆಯ ನಡವಳಿ ಕ್ರ.ಸಂ-2 ರಲ್ಲಿ 10 ಮತ್ತು 12 ನೇ ತರಗತಿಗೆ ನೀಡಿರುವಂತೆ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೂ ರಿಯಾಯತಿ/ವಿನಾಯತಿ ಸೌಲಭ್ಯಗಳನ್ನು ಒದಗಿಸಲು ನಿರ್ಣಯವಾಗಿರುತ್ತದೆ.
ಈ ಹಿನ್ನಲೆಯಲ್ಲಿ ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಒದಗಿಸಬೇಕಿರುವ ಪರೀಕ್ಷಾ ಸಂಬಂಧಿತ ಸೌಲಭ್ಯಗಳ ಪಟ್ಟಿಯನ್ನು ಹಾಗೂ ವಿದ್ಯಾರ್ಥಿಗಳು ಈ ಸೌಲಭ್ಯಗಳನ್ನು ಪಡೆಯಲು ಅಗತ್ಯವಿರುವ ಪಮಾಣ ಪತ್ರ ಪಡೆಯಲು ವಿವರಗಳನ್ನು ಒದಗಿಸಲಾಗಿದ್ದು, 1 ರಿಂದ 9ನೇ ತರಗತಿವರೆಗಿನ ರಾಜ್ಯಪಠ್ಯ ಕ್ರಮದ ವಿದ್ಯಾರ್ಥಿಗಳಿಗೆ ಪರೀಕ್ಷಾ ವಿನಾಯತಿ ನೀಡುವ ಬಗ್ಗೆ ಆದೇಶ ಹೊರಡಿಸಲು ಕೋರಿರುತ್ತಾರೆ.
ರಾಜ್ಯ ಯೋಜನಾ ನಿರ್ದೇಶಕರು, ಸಮಗ್ರ ಶಿಕ್ಷಣ ಕರ್ನಾಟಕ ರವರ ಪ್ರಸ್ತಾವನೆಗೆ ಸಂಬಂಧಿಸಿದಂತೆ, 1 ರಿಂದ 9 ನೇ ತರಗತಿವರೆಗಿನ ರಾಜ್ಯ ಪಠ್ಯಕ್ರಮದ ವಿದ್ಯಾರ್ಥಿಗಳಿಗೆ ರಿಯಾಯತಿ/ವಿನಾಯತಿ ಸೌಲಭ್ಯಗಳನ್ನು ಒದಗಿಸಲು ಸರ್ಕಾರವು ತೀರ್ಮಾನಿಸಲಾಗಿದ್ದು, ಅದರಂತೆ ಈ ಕೆಳಕಂಡ ಆದೇಶ ಹೊರಡಿಸಿದೆ.