![](https://kannadadunia.com/wp-content/uploads/2024/02/WhatsApp-Image-2024-02-10-at-7.09.42-PM.jpeg)
ಬೆಂಗಳೂರು : ಬರದಿಂದ ತತ್ತರಿಸಿರುವ ಜನತೆಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಗುಳೇ ಹೋಗದಂತೆ ತಡೆಯಲು 860 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಲಾಗಿದೆ.
ಈ ಕುರಿತು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದು, ಜನರು ಗುಳೇ ಹೋಗದಂತೆ ತಡೆಯಲು ಹಾಗೂ ಕುಡಿಯುವ ನೀರಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಈ ಬಗ್ಗೆ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ. ₹ 2000ದಂತೆ ಅಂದಾಜು 34 ಲಕ್ಷ ರೈತರಿಗೆ ₹ 650 ಕೋಟಿ ತಾತ್ಕಾಲಿಕ ಪರಿಹಾರ ನೀಡಲಾಗಿದೆ ತಿಳಿಸಿದ್ದಾರೆ.
ಬರದ ಹಿನ್ನೆಲೆಯಲ್ಲಿ ರಾಜ್ಯದ ಜನರಿಗೆ ಕುಡಿಯುವ ನೀರು, ಮೇವು, ಉದ್ಯೋಗ ಒದಗಿಸಲಾಗುತ್ತಿದೆ. ರಾಜ್ಯದಿಂದ 860 ಕೋಟಿ ರೂ. ಪರಿಹಾರ ಬಿಡುಗಡೆ ಮಾಡಲಾಗಿದ್ದು, ಇದನ್ನು ಎಲ್ಲಾ ಜಿಲ್ಲಾಧಿಕಾರಿಗಳ ಖಾತೆಗೆ ಜಮೆ ಮಾಡಲಾಗಿದೆ ಎಂದು ಹೇಳಿದ್ದಾರೆ.