ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ – ಭಾರತ್ ಗೌರವ್ ದ್ವಾರಕಾ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಅತ್ಯಂತ ಕಡಿಮೆ ವೆಚ್ಚದಲ್ಲಿ ದ್ವಾರಕಾ, ನಾಗೇಶ್ವರ, ಸೋಮನಾಥ ಹಾಗೂ ತ್ರಯಂಬಕೇಶ್ವರ ದೇವಾಲಯಗಳ ಭೇಟಿಗೆ ಅವಕಾಶ ಕಲ್ಪಿಸಲಾಗಿದೆ.
ಈ ಪ್ಯಾಕೇಜ್ಗೆ ಒಟ್ಟು ₹30,000 ತಗುಲಲಿದ್ದು, ಈ ಪೈಕಿ ರಾಜ್ಯ ಸರ್ಕಾರದ ವತಿಯಿಂದ ಅಂದಾಜು ₹15,000 ಮೊತ್ತವನ್ನು ಭರಿಸಲಾಗುತ್ತದೆ. ಯಾತ್ರಾರ್ಥಿಗಳು ಬುಕ್ಕಿಂಗ್ ಮೊತ್ತವಾಗಿ ₹15,000 ಅನ್ನು ಮಾತ್ರ ಪಾವತಿಸಬೇಕಾಗುತ್ತದೆ.
ಪ್ರವರ್ಗ ʼಸಿʼ ಅಧಿಸೂಚಿತ ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು / ನೌಕರರು ಭಾರತ್ ಗೌರವ್ ದ್ವಾರಕಾ ಯಾತ್ರೆ ತೆರಳಲು ಇಚ್ಛಿಸಿದ್ದಲ್ಲಿ ದಾಖಲೆಗಳೊಂದಿಗೆ ಆಯುಕ್ತರ ಕಚೇರಿಗೆ ನೇರವಾಗಿ ಸೆಪ್ಟೆಂಬರ್ 20ರ ಒಳಗಾಗಿ ಮನವಿ ಸಲ್ಲಿಸಬಹುದಾಗಿದೆ.
ಬುಕ್ಕಿಂಗ್ಗಾಗಿ https://www.irctctourism.com/Karnatakbgaurav?searchKey=&tagType=&travelType=Domestic§or=All&bdar=6 ವೆಬ್ಸೈಟ್ಗೆ ಭೇಟಿ ನೀಡಬಹುದು. ಅಥವಾ 9003140710, 8595931292, 8595931294, 9731641611, 8595931293, 8595931291 ಗೆ ಕರೆ ಮಾಡಿ ಟಿಕೆಟ್ ಬುಕ್ ಮಾಡಿಕೊಳ್ಳಬಹುದು.