alex Certify ʻಕಂಪ್ಯೂಟರ್ ಸಾಕ್ಷರತಾ ಪರೀಕ್ಷೆʼ (CLT) ಪಾಸಾದ ಶಿಕ್ಷಣ ಇಲಾಖೆಯ ನೌಕರರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ʻಪ್ರೋತ್ಸಾಹಧನʼ ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʻಕಂಪ್ಯೂಟರ್ ಸಾಕ್ಷರತಾ ಪರೀಕ್ಷೆʼ (CLT) ಪಾಸಾದ ಶಿಕ್ಷಣ ಇಲಾಖೆಯ ನೌಕರರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ʻಪ್ರೋತ್ಸಾಹಧನʼ ಬಿಡುಗಡೆ

ಬೆಂಗಳೂರು : ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸೇವಾನಿರತ ಅರ್ಹ ಸರ್ಕಾರಿ ನೌಕರರಿಗೆ ರೂ.5000/-ಗಳ ಪ್ರೋತ್ಸಾಹ ಧನವನ್ನು ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ವಿಷಯಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸಿವಿಲ್ ಸೇವಾ(ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012 ಜಾರಿಗೆ ಬಂದ ದಿ:22.03.2012 ರಂದು ಸೇವೆಯಲ್ಲಿದ್ದು, ದಿ:17.04.2021 ರೊಳಗೆ ಸದರಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸೇವಾನಿರತ ಅರ್ಹ ಸರ್ಕಾರಿ ನೌಕರರಿಗೆ ರೂ.5000/-ಗಳ ಪ್ರೋತ್ಸಾಹ ಧನವನ್ನು ಮಂಜೂರು ಮಾಡಲು ಸದರಿ ನಿಯಮಗಳ ನಿಯಮ-3(3)ರಲ್ಲಿ ಅವಕಾಶ ಕಲ್ಪಿಸಲಾಗಿದೆ. ಸದರಿ ಪ್ರೋತ್ಸಾಹ ಧನವನ್ನು ಸದರಿ “ಸರ್ಕಾರಿ ನೌಕರನು ವೇತನ ಪಡೆಯುವ ಲೆಕ್ಕಶೀರ್ಷಿಕೆಯಡಿ “Subsidiary Suspenses” ಉಪಶೀರ್ಷಿಕೆಯಡಿಯಲ್ಲಿ ಭರಿಸುವುದು” ಎಂದು ಆದೇಶಿಸಲಾಗಿದೆ. ಸದರಿ ಸರ್ಕಾರಿ ಆದೇಶದನ್ವಯ ಪ್ರೋತ್ಸಾಹ ಧನವನ್ನು ನೀಡಲು ಖಜಾನೆ ಆಯುಕ್ತರಿಂದ ಖಜಾನೆ ಇಲಾಖೆಯ ಸಿಬ್ಬಂದಿಗಳಿಗೆ ಪ್ರೋತ್ಸಾಹ ಧನ ಪಾವತಿಸುವ ಬಗ್ಗೆ ಉಲ್ಲೇಖ(2)ರಂತೆ ಪ್ರತ್ಯೇಕವಾಗಿ ಸೂಚಿಸಲಾಗಿರುತ್ತದೆ.

ಶಾಲಾ ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರು/ಸಿಬ್ಬಂದಿಗಳಿಗೆ ಸದರಿ ಆದೇಶದನ್ವಯ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಪ್ರೋತ್ಸಾಹ ಧನ ನೀಡಲು ಕೋರಿದಾಗ ಖಜಾನೆಯಲ್ಲಿ ಶಾಲಾ ಶಿಕ್ಷಣ ಇಲಾಖಾ ಮುಖ್ಯಸ್ಥರಾದ ಮಾನ್ಯ ಆಯುಕ್ತರ ಆದೇಶವನ್ನು ಕೋರಿರುತ್ತಾರೆ. ಆದ ಕಾರಣ ಶಾಲಾ ಶಿಕ್ಷಣ ಇಲಾಖೆಯಿಂದ ಪ್ರತ್ಯೇಕವಾಗಿ ಆದೇಶವನ್ನು ಹೊರಡಿಸುವಂತೆ ಉಲ್ಲೇಖ(3) ರಲ್ಲಿ ಮಾನ್ಯ ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ(ರಿ) ಇವರು ಕೋರಿರುತ್ತಾರೆ.

ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಪ್ರೋತ್ಸಾಹ ಧನ ನೀಡುವ ಸಂಬಂಧ ಈಗಾಗಲೇ ಸರ್ಕಾರದಿಂದ ಉಲ್ಲೇಖ(1) ರ ಆದೇಶದಲ್ಲಿ ಈ ಬಗ್ಗೆ ಸೂಕ್ತ ಮಾರ್ಗದರ್ಶನವನ್ನು ನೀಡಲಾಗಿರುತ್ತದೆ. ಶಾಲಾ ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಜಿಲ್ಲಾ ಮತ್ತು ತಾಲ್ಲೂಕು ವಲಯಗಳಲ್ಲಿ ಪ್ರೋತ್ಸಾಹ ಧನ ನೀಡಲು ಈ ಕೆಳಕಂಡ ಲೆಕ್ಕಶೀರ್ಷಿಕೆ/ಉಪಲೆಕ್ಕಶೀರ್ಷಿಕೆಯಡಿ ಕ್ರಮಕೈಗೊಳ್ಳಬಹುದಾಗಿರುತ್ತದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...