ಬೆಂಗಳೂರು : ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಸಿಹಿಸುದ್ದಿ ನೀಡಿದ್ದು, ಕುಟುಂಬದ ಅತ್ಯಂತ ಹಿರಿಯ ಸದಸ್ಯರ ಬ್ಯಾಂಕ್ ಖಾತೆಗೆ ನೇರ ಹಣ ವರ್ಗಾವಣೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆಲ್ಲ ನೆರವು ತಲುಪಿಸುವ ನಿಟ್ಟಿನಲ್ಲಿ ಮುಖ್ಯಸ್ಥರ ಅನುಪಸ್ಥಿತಿಯಲ್ಲಿ ಕುಟುಂಬದ ಅತ್ಯಂತ ಹಿರಿಯ ಸದಸ್ಯರ ಬ್ಯಾಂಕ್ ಖಾತೆಗೆ ನೇರ ಹಣ ವರ್ಗಾವಣೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ಗೃಹಲಕ್ಷ್ಮಿ ಯೋಜನೆ : ಕುಟುಂಬದ ಯಜಮಾನಿಯ ಅನುಪಸ್ಥಿತಿಯಲ್ಲಿ 2 ನೇ ಹಿರಿಯ ಗೃಹಿಣಿ ಖಾತೆಗೆ 2,000 ರೂ. ನೆರವಿನ ಹಣ ಸಿಗಲಿದೆ.
ಅನ್ನಭಾಗ್ಯ : ಕುಟುಂಬದ ಮುಖ್ಯಸ್ಥರ ಅನುಪಸ್ಥಿತಿಯಲ್ಲಿ 2 ನೇ ಹಿರಿಯ ಸದಸ್ಯರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತದೆ.