ಬೆಂಗಳೂರು :ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ ಈವರೆಗೆ ಹಣ ಬಾರದೆ ಇರುವವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗೃಹಲಕ್ಷ್ಮಿ ಅದಾಲತ್ ಆಯೋಜನೆ ಮಾಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳು ಪೂರ್ಣಗೊಂಡಿರುವ ಹಿನ್ನೆಲೆ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹಲಕ್ಷ್ಮಿ ಯೋಜನೆಯ ಎಲ್ಲ ಅರ್ಹ ಫಲಾನುಭವಿಗಳಿಗೆ ಡಿಸೆಂಬರ್ ಒಳಗೆ ಸೌಲಭ್ಯ ಕಲ್ಪಿಸುವಂತೆ ಸೂಚನೆ ನೀಡಿದ್ದಾರೆ.
ಗೃಹಲಕ್ಷ್ಮಿ ಫಲಾನುಭವಿಗಳು ಬಿಟ್ಟು ಹೋಗಿದ್ದಲ್ಲಿ ಅಥವಾ ಬ್ಯಾಂಕ್ ಖಾತೆ, ಆಧಾರ್ ಲಿಂಕ್ ಮತ್ತಿತರ ಸಮಸ್ಯೆಗಳ ನಿವಾರಣೆಗಾಗಿ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗೃಹಲಕ್ಷ್ಮಿ ಅದಾಲತ್ ಆಯೋಜಿಸಿ ಡಿಸೆಂಬರ್ ಒಳಗೆ ಎಲ್ಲ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ಕಲ್ಪಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.