ಡಿಜಿಟಲ್ ಡೆಸ್ಕ್ : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ 2024-25 ನೇ ಸಾಲಿನ ಐಐಎಸ್ಸಿ, ಐಐಟಿ ಮತ್ತು ಎನ್ಐಟಿ( IISc, IIT, NIT ) ಸಂಸ್ಥೆಗಳ ಮೂಲಕ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಆಂಡ್ ಮಷೀನ್ ಲರ್ನಿಂಗ್ ಮುಂತಾದ ವೃತ್ತಿಪರ ತರಬೇತಿ ಕೋರ್ಸ್ಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡಗಳ ಇಂಜಿನಿಯರಿಂಗ್ ಪದವೀಧರರಿಗೆ ಶಿಷ್ಯವೇತನ/ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಏಪ್ರಿಲ್ 11 ಕಡೆಯ ದಿನವಾಗಿದ್ದು ಅರ್ಹ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಕಚೇರಿಯಿಂದ ಅರ್ಜಿ ನಮೂನೆ ಪಡೆದು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. 200 ಇಂಜಿನಿಯರಿಂಗ್ ಪದವೀಧರರಿಗೆ ರೂ.15000/- ಗಳ ಶಿಷ್ಯ ವೇತನ/ತರಬೇತಿ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಪರಿಶಿಷ್ಟ ವರ್ಗಗಳ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಶಿವಮೊಗ್ಗ ಮತ್ತು ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಸ್ ಜಿ ಶ್ರೀನಿವಾಸ್ ತಿಳಿಸಿದ್ದಾರೆ.