alex Certify ರೈತರಿಗೆ ಖುಷಿ ಸುದ್ದಿ : `ಬಗರ್ ಹುಕುಂ’ ಅರ್ಜಿ ಶೀಘ್ರ ವಿಲೇವಾರಿಗೆ `ಆ್ಯಪ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಖುಷಿ ಸುದ್ದಿ : `ಬಗರ್ ಹುಕುಂ’ ಅರ್ಜಿ ಶೀಘ್ರ ವಿಲೇವಾರಿಗೆ `ಆ್ಯಪ್’

ಬೆಂಗಳೂರು : ಬಗರ್ ಹುಕುಂ ಸಾಗುವಳಿ ಮಾಡುವ ರೈತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ಅಕ್ರಮ ಸಕ್ರಮ ಯೋಜನೆಯಡಿ ನಮೂನೆ 50,53, 57 ಅಡಿ ಸಲ್ಲಿಕೆಯಾದ ಅರ್ಜಿಗಳನ್ನು ವಿಲೇವಾರಿ ಮಾಡಲು ಬಗರ್ ಹುಕುಂ ತಂತ್ರಾಂಶ ಅನುಷ್ಠಾನ ಮಾಡಲಾಗಿದೆ.

ಈ ಆ್ಯಪ್‌ ನೆರವಿನಿಂದ ಅಕ್ರಮ ಸಾಗುವಳಿ ಭೂಮಿಯಲ್ಲಿ ಕೃಷಿ ಅಥವಾ ಇತರ ಚಟುವಟಿಕೆ ಬಗ್ಗೆ ಸ್ಯಾಟಲೈಟ್‌ ಚಿತ್ರದ ಮೂಲಕ ಮಾಹಿತಿ ಪಡೆದು ಅರ್ಜಿ ವಿಲೇವಾರಿ ಮಾಡುವುದು ನ್ಯಾಯ-ಸಮ್ಮತವಾಗಲಿದೆ. ಅರ್ಜಿಗಳ ಶೀಘ್ರ ವಿಲೇವಾರಿಗೂ ಈ ಆ್ಯಪ್‌ ಸಹಕಾರಿಯಾಗಿಲಿದೆ.

ವಿಕಾಸಸೌಧದಲ್ಲಿ ಬುಧವಾರ ನಡೆದ ಸಭೆಯಲ್ಲಿ ಬಗರ್‌ ಹುಕುಂ ಆ್ಯಪ್‌ ಕುರಿತು ಅಧಿಕಾರಿಗಳು ಸಚಿವರಿಗೆ ಪ್ರಾತ್ಯಕ್ಷಿಕೆ ತೋರಿಸಿದರು. ಈ ವೇಳೆ ಸಚಿವ ಕೃಷ್ಣಬೈರೇಗೌಡ ಅವರು, ಯಾವುದೇ ಲೋಪದೋಷ ಇಲ್ಲದಂತೆ ಆ್ಯಪ್‌ ಅಭಿವೃದ್ಧಿಪಡಿಸುವಂತೆ ನಿರ್ದೇಶನ ನೀಡಿದರು.  ಅಕ್ರಮ-ಸಕ್ರಮ ಯೋಜನೆಯಡಿ ಸಲ್ಲಿಕೆಯಾದ ಅರ್ಜಿಗಳ ನ್ಯಾಯಯುತ ವಿಲೇವಾರಿ ಮತ್ತು ಅನಧಿಕೃತ ಸಾಗುವಳಿ ಭೂಮಿಯನ್ನು ಸಕ್ರಮಗೊಳಿಸುವ ಪ್ರಕ್ರಿಯೆ ಶೀಘ್ರವೇ ಮುಗಿಸುವಂತೆ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...