alex Certify ರೈತರಿಗೆ ಗುಡ್ ನ್ಯೂಸ್ : ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಗುಡ್ ನ್ಯೂಸ್ : ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಗೆ ಅರ್ಜಿ ಆಹ್ವಾನ

ಪ್ರಧಾನ ಮಂತ್ರಿ ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ 2022-23 ರಿಂದ 2024-25 ನೇ ಸಾಲಿನವರೆಗೆ ವಿವಿಧ ಘಟಕಗಳಿಗೆ ಸಹಾಯಧನ ನೀಡಲು ಮೀನುಗಾರಿಕಾ ಇಲಾಖೆ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ.

ಸಹಾಯಧನ ಘಟಕಗಳ ಉಪಯೋಜನೆಗಳನ್ನು ಪಡೆಯಲು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ.40 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮಹಿಳಾ ಫಲಾನುಭವಿಗಳಿಗೆ ಶೇ.60 ರಷ್ಟು ಸಹಾಯಧನ ನೀಡಲಾಗುತ್ತದೆ.

ಮೀನು ಕೃಷಿಕೊಳಗಳ ನಿರ್ಮಾಣ ಒಟ್ಟು 4.90 ಹೆಕ್ಟೇರ್ಗೆ ಸಾಮಾನ್ಯ 3.10 ಹೆಕ್ಟೇರ್ ಮತ್ತು ಪರಿಶಿಷ್ಟ ಜಾತಿಗೆ 1.80 ಹೆಕ್ಟೇರ್ ನೀಡಲಿದ್ದು, ಮೀನುಕೃಷಿ ಕೊಳ ನಿರ್ಮಾಣ ಮಾಡಿ ಮೀನು ಕೃಷಿ ಕೈಗೊಂಡವರಿಗೆ ಹೂಡಿಕೆಗಳ ವೆಚ್ಚದ ಮೇಲೆ ಒಟ್ಟು 8.60 ಹೆಕ್ಟೇರ್ಗೆ ಸಾಮಾನ್ಯ 4.80 ಹೆಕ್ಟೇರ್, ಸಾಮಾನ್ಯ ಮಹಿಳೆ 1.80 ಹೆಕ್ಟೇರ್, ಪರಿಶಿಷ್ಟ ಜಾತಿ 1.00 ಹೆಕ್ಟೇರ್ ಮತ್ತು ಪರಿಶಿಷ್ಟ ಪಂಗಡ 1.00 ಹೆಕ್ಟೇರ್, ಯಾಂತ್ರೀಕೃತ ದೋಣಿ ಹಾಗೂ ಸಾಂಪ್ರದಾಯಿಕ ಮೀನುಗಾರರಿಗೆ-ಎಫ್ಆರ್ಪಿ ಬದಲಿ ದೋಣಿ ನಿರ್ಮಾಣದ 1 ಘಟಕಕ್ಕೆ ಸಾಮಾನ್ಯ-01, ಜೊತೆಗೆ ಮೀನುಮರಿ ಪಾಲನಾ ಘಟಕ ನಿರ್ಮಾಣದ ಸಹಾಯಕ್ಕೆ ಒಟ್ಟು 6.02 ಹೆಕ್ಟೇರ್ ಅದರಲ್ಲಿ ಸಾಮಾನ್ಯ 2.08 ಹೆಕ್ಟೇರ್, ಮಹಿಳೆ 1.84 ಹೆಕ್ಟೇರ್ ಮತ್ತು ಪರಿಶಿಷ್ಟ ಪಂಗಡ 2.10 ಹೆಕ್ಟೇರ್ ನೀಡಲಾಗುತ್ತದೆ.

ಸೈಕಲ್ ವಿತ್ ಐಸ್ ಬಾಕ್ಸ್ ಸಾಮಾನ್ಯ ವರ್ಗಕ್ಕೆ 1 ಗುರಿ, ಮಧ್ಯಮ ವರ್ಗದ ಅಲಂಕಾರಿಕ ಸಾಕಾಣಿಕಾ ಘಟಕದ ಪರಿಶಿಷ್ಟ ಜಾತಿ 1 ಗುರಿ ಇದೆ. ಹೊಸತಾದ ಮೀನು ಮಾರಾಟದ ಕಿಯೋಸ್ಕ್ ನಿಮಾಣಕ್ಕಾಗಿ ಅಲಂಕಾರಿಕಾ ಮೀನುಮಾರಾಟ ಮಳಿಗೆ ಸೇರಿದಂತೆ ಪರಿಶಿಷ್ಟ ಜಾತಿ 01 ಘಟಕ. ಆಸಕ್ತರು ಜ. 15 ರ ಸಂಜೆ 5.30 ಗಂಟೆಯೊಳಗೆ ಆಯಾ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯಿಂದ ಅರ್ಜಿಗಳನ್ನು ಪಡೆದು ಸಂಬAಧಪಟ್ಟ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಪೂರ್ಣ ದಾಖಲೆಗಳೊಂದಿಗೆ ಸಲ್ಲಿಸಬೇಕು ಎಂದು ಮೀನುಗಾರಿಕೆ ಉಪನಿದೇರ್ಶಕರು ತಿಳಿಸಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...