ಬಳ್ಳಾರಿ : ಪ್ರಸ್ತಕ ಸಾಲಿನಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತೋಟಗಾರಿಕೆ ಬೆಳೆ ಬೆಳೆಯುವ ರೈತರಿಗೆ ಹನಿ ನೀರಾವರಿ ಘಟಕ ನಿರ್ಮಾಣಕ್ಕಾಗಿ ಸಹಾಯಧನ ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೇಂದ್ರ ಸರ್ಕಾರ ಮಾರ್ಗಸೂಚಿಯನ್ವಯ ಈ ಯೋಜನೆಯಡಿ ಎಲ್ಲಾ ವರ್ಗದ ರೈತರಿಗೆ 5 ಹೆಕ್ಟೇರ್ ಪ್ರದೇಶಕ್ಕೆ ಸಹಾಯಧನ ವಿತರಿಸಲು ಅವಕಾಶವಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರಿಗೆ 2ಹೆಕ್ಟೇರ್ ಪ್ರದೇಶಕ್ಕೆ ಶೇ.90ರ ಸಹಾಯಧನ ಹಾಗೂ ಇತರೆ ರೈತರಿಗೆ ಶೇ.75ರ ಸಹಾಯಧನವನ್ನು 2ಹೆಕ್ಟೇರ್ ಪ್ರದೇಶದವರೆಗೆ ಸಹಾಯಧನ ನೀಡಲಾಗುವುದು.
ಖಾಯಂ ನೀರಾವರಿ ಸೌಲಭ್ಯವಿರುವ ಹಾಗೂ ತೋಟಗಾರಿಕೆ ಬೆಳೆ ಹೊಂದಿರುವ ಅಥವಾ ಬೆಳೆಯಲು ಆಸಕ್ತಿ ಹೊಂದಿರುವ ರೈತರು ಅಗತ್ಯ ದಾಖಲಾತಿಗಳೊಂದಿಗೆ ತೋಟಗಾರಿಕೆ ಇಲಾಖೆ ಕಚೇರಿಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರಗಳು ಅಥವಾ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಹಾಗೂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಸಂತೋಷ್ ಸಪ್ಪಂಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.