ಶಿವಮೊಗ್ಗ : ಸೂಕ್ಷ್ಮ ನೀರಾವರಿ ಯೋಜನೆಯಡಿ ತುಂತುರು ನೀರಾವರಿ ಯೋಜನೆಯಡಿ ಜೆಟ್ ಪೈಪು/ಸ್ಪಿಕ್ಲಲ್ ಸೌಲಭ್ಯ ಪಡೆಯಲು ಕೃಷಿ ಇಲಾಖೆ ಶಿವಮೊಗ್ಗ ವತಿಯಿಂದ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸೂಕ್ಷ್ಮ ನೀರಾವರಿ ಯೋಜನೆಯಡಿ ತುಂತುರು ನೀರಾವರಿ ಘಟಕವನ್ನು ಶೇ. 90 ರ ಸಹಾಯಧನದಲ್ಲಿ ಸಾಮಾನ್ಯ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತರಿಗೆ ವಿತರಿಸಲಾಗುತ್ತಿದ್ದು, ಅವಶ್ಯಕತೆ ಇರುವ ರೈತರು ಸದರಿ ಯೋಜನೆಯ ಉಪಯೋಗ ಪಡೆಯಲು ಅರ್ಜಿಯೊಂದಿಗೆ ಆಧಾರ್ ಕಾರ್ಡ್ ಜೆರಾಕ್ಸ್, ಪಹಣ, 2 ಪಾಸ್ಪೋರ್ಟ್ ಸೈಜ್ ಪೋಟೋ, ಬ್ಯಾಂಕ್ ಪಾಸ್ಬುಕ್ ಜೆರಾಕ್ಸ್, ನೋಟರಿ, ಜಾತಿ ಪ್ರಮಾಣ ಪತ್ರ (ಪ.ಜಾತಿ ಹಾಗೂಪ.ಪಂಗಡ) ಈ ದಾಖಲೆಯೊಂದಿಗೆ ಸಮೀಪದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಬಹುದು.
ಪ.ಜಾತಿ ಹಾಗೂ ಪ.ಪಂಗಡ ರೈತರು 7 ವರ್ಷಕೊಮ್ಮೆ ಮತ್ತು ಸಾಮಾನ್ಯ ರೈತರಿಗೆ ಒಮ್ಮೆ ಮಾತ್ರ ಈ ಸ್ವೌಲಭ್ಯ ಪಡೆಯಲು ಅವಕಾಶವಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ತಾಲ್ಲೂಕಿನ ಹೋಬಳಿ ಮಟ್ಟದ ಕೃಷಿ ಅಧಿಕಾರಿಗಳನ್ನು ಹಾಗೂ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದೆಂದು ಶಿವಮೊಗ್ಗ ಸಹಾಯಕ ಕೃಷಿ ನಿರ್ದೇಶಕರು ರಮೇಶ್ ಎಸ್ ತಿಳಿಸಿದ್ದಾರೆ.