alex Certify ರೈತರಿಗೆ ಗುಡ್ ನ್ಯೂಸ್ : ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಗುಡ್ ನ್ಯೂಸ್ : ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : 2023-24 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಅಳವಡಿಕೆಗಾಗಿ ಶಿಕಾರಿಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಿಂದ ಅರ್ಜಿ ಆಹ್ವಾನಿಸಲಾಗಿದೆ.

ಶೇ.75 ರಷ್ಟು ಸಾಮಾನ್ಯ ವರ್ಗದ ರೈತರಿಗೆ ಹಾಗೂ ಶೇ.90 ರಷ್ಟು ಪರಿಶಿಷ್ಟ ಜಾತಿ ಮತ್ತು ಪರಿಶೀಷ್ಟ ಪಂಗಡದ ರೈತರಿಗೆ 2 ಹೆಕ್ಟೇರ್ ವರೆಗೆ ಹನಿ ನೀರಾವರಿ ಅಳವಡಿಕೆಗೆ ಸಹಾಯಧನ ಸೌಲಭ್ಯವನ್ನು ಹಾಗೂ 2 ಹೆಕ್ಟೇರ್ ಮೇಲ್ಪಟ್ಟ ಹನಿ ನೀರಾವರಿ ಪ್ರದೇಶಕ್ಕೆ ಶೇ. 45 ರಷ್ಟು ಸಹಾಯಧನ ನೀಡಲಾಗುವುದು. ಇಲಾಖೆಯಿಂದ ಅನುಮೋದನೆಗೊಂಡ ಕಂಪನಿಗಳ ಮೂಲಕವೇ ರೈತರು ಸೂಕ್ಷ್ಮ ನೀರಾವರಿ ಘಟಕವನ್ನು ಅಳವಡಿಸಿಕೊಳ್ಳುವುದು.

ಆಸಕ್ತ ರೈತರು ರೈತ ಸಂಪರ್ಕ ಕೇಂದ್ರ ಅಧಿಕಾರಿಗಳು ಹಾsಗೂ ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಿ ಅರ್ಜಿಯನ್ನು ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಅ.31 ರೊಳಗಾಗಿ ಶಿಕಾರಿಪುರ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರ ಕಚೇರಿಗೆ ಸಲ್ಲಿಸುವಂತೆ ಶಿಕಾರಿಪುರ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.:08187-223544 ನ್ನು ಸಂಪರ್ಕಿಸುವುದು ಎಂದು ಪ್ರಕಟಣೆ ತಿಳಿಸಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...