ಬೆಂಗಳೂರು : ರಾಜ್ಯ ಸರ್ಕಾರ ರೈತರಿಗೆ ಗುಡ್ ನ್ಯೂಸ್ ನೀಡಿದ್ದು, ಪಂಪ್ ಸೆಟ್ ಸಹಾಯಧನ 30% ರಿಂದ 50% ಗೆ ಹೆಚ್ಚಳ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಬಜೆಟ್ ನಲ್ಲಿ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ ಸೋಲರ್ ಪಂಪ್ಸೆಂಟ್ ಹಾಕುವ ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿದ್ದ ಸಹಾಯಧನ 30% ರಿಂದ 50% ಗೆ ಹೆಚ್ಚಳ ಮಾಡಲಾಗುತ್ತದೆ ಎಂದರು. ರೈತ ಮಹಿಳೆಯರಿಗೆ ಹೈನುಗಾರಿಕೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ 6% ರಷ್ಟು ಬಡ್ಡಿ ದರದಲ್ಲಿ ಪ್ರೋತ್ಸಾಹ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ಮಂಡನೆ ಮಾಡುತ್ತಿರುವ 15ನೇ ಬಜೆಟ್ ಇದಾಗಿದೆ.