ಬೆಂಗಳೂರು : ರಾಜ್ಯದ ರೈತರಿಗೆ ಸಿಹಿಸುದ್ದಿ ಸಿಕ್ಕಿದ್ದು, ಕರಾವಳಿ ಸೇರಿದಂತೆ ಹಲವು ಕಡೆ ಮುಂದಿನ 5 ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರತೀಯ ಹವಾಮಾನ ಇಲಾಖೆ ಸ್ಯಾಟಲೈಟ್ ಫೋಟೋಗಳನ್ನು ರಿಲೀಸ್ ಮಾಡಿದ್ದು, ದಟ್ಟ ಮೋಡಗಳು ಕರ್ನಾಟಕವನ್ನು ಆವರಿಸಿದೆ, ಹೀಗಾಗಿ ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆ ಇರಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಕಲಬುರಗಿ, ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು, ಭಾಗದಲ್ಲಿ ಚದುರಿದಂತೆ ಮಳೆಯಾಗಲಿದೆ. ಬೆಂಗಳೂರಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ. ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಳಗಾವಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು , ರಾಮನಗರ ಮತ್ತು ಮಂಡ್ಯ ಜಿಲ್ಲೆಯಲ್ಲಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.