![](https://kannadadunia.com/wp-content/uploads/2023/12/BagarHukum-Aap.jpg)
ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರೈತರಿಗೆ ಬೆಳೆ ಪರಿಹಾರ ವಿತರಣೆ, ಬಗರ್ ಹುಕುಂ ಅರ್ಜಿಗಳ ತ್ವರಿತ ವಿಲೇವಾರಿ ಹಾಗೂ ಕಂದಾಯ ಗ್ರಾಮಗಳ ಘೋಷಣೆ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಬಗರ್ ಹುಕುಂ ಆಯಪ್ ಬಿಡುಗಡೆ ಮಾಡಲಾಗಿದೆ.
ಸಚಿವ ಕೃಷ್ಣ ಬೈರೇಗೌಡ ಅವರು ಆಯಪ್ ಬಿಡುಗಡೆ ಮಾಡಿದ್ದು,ರೈತರಿಗೆ ಬೆಳೆ ಪರಿಹಾರ ವಿತರಣೆ, ಬಗರ್ ಹುಕುಂ ಅರ್ಜಿಗಳ ತ್ವರಿತ ವಿಲೇವಾರಿ ಹಾಗೂ ಕಂದಾಯ ಗ್ರಾಮಗಳ ಘೋಷಣೆ ಪ್ರಕ್ರಿಯೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಆದ್ಯತೆ ನೀಡಲಾಗಿದೆ. ಬಗರ್ ಹುಕುಂ ಆ್ಯಪ್ಅನ್ನು ಅಭಿವೃದ್ಧಿ ಪಡಿಸಲಾಗಿದೆ. ಗ್ರಾಮ ಲೆಕ್ಕಿಗ ಸ್ಥಳಕ್ಕೆ ತೆರಳಿ ಈ ಆ್ಯಪ್ ಮೂಲಕ ಜಿಯೋ ಫೆನ್ಸ್ ಮಾಡುತ್ತಾರೆ. ಬಳಿಕ ತಹಸೀಲ್ದಾರರು ಸ್ಯಾಟಲೈಟ್ ಇಮೇಜ್ ಪಡೆದು ಪರಿಶೀಲನೆ ನಡೆಸುತ್ತಾರೆ. ನಂತರ ಹೊಸ ಸರ್ವೇ ನಂಬರ್ ಹಾಗೂ ಡಿಜಿಟಲ್ ಇ-ಸಾಗುವಳಿ ಚೀಟಿ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಈ ಆಯಪ್ ನೆರವಿನಿಂದ ಅಕ್ರಮ ಸಾಗುವಳಿ ಭೂಮಿಯಲ್ಲಿ ಕೃಷಿ ಅಥವಾ ಇತರ ಚಟುವಟಿಕೆ ಬಗ್ಗೆ ಸ್ಯಾಟಲೈಟ್ ಚಿತ್ರದ ಮೂಲಕ ಮಾಹಿತಿ ಪಡೆದು ಅರ್ಜಿ ವಿಲೇವಾರಿ ಮಾಡುವುದು ನ್ಯಾಯ-ಸಮ್ಮತವಾಗಲಿದೆ ಎಂದರು.
ನಮೂನೆ 50, 53, 57ರ ಅಕ್ರಮ ಸಕ್ರಮ ಯೋಜನೆಯಡಿ ಸಾವಿರಾರು ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ ಕೃಷಿಯೇತರ ಚಟುವಟಿಕೆಗಳಲ್ಲಿ ತೊಡಗಿರುವವರಿಗೆ ಸಾಗುವಳಿ ಚೀಟಿ ನೀಡಲ್ಲ. ಬಗರ್ ಹುಕುಂ ತಂತ್ರಾಶ ಬಳಸಿ ಅರ್ಜಿ ವಿಲೇವಾರಿ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.