ಬೆಳಗಾವಿ : ರಾಜ್ಯದ ರೈತ ಸಮುದಾಯಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ಸಿಹಿಸುದ್ದಿ ನೀಡಿದ್ದು, ಬೆಳೆ ವಿಮೆ ಪರಿಹಾರವನ್ನು ವಿಮಾ ಸ೦ಸ್ಥೆಯವರಿ೦ದ ಕಾಲಮಿತಿಯಲ್ಲಿ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವರು, ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ 2023ರ ಮುಂಗಾರು ಹಂಗಾಮಿನ ಬೆಳೆ ಕಟಾವು ಪ್ರಯೋಗಗಳು ಅಂತಿಮ ಹಂತದಲ್ಲಿದ್ದು ಬೆಳೆ ಕಟಾವು ಪ್ರಯೋಗಗಳ ಅಂತಿಮ ಇಳುವರಿ ಆಧಾರದ ಮೇಲೆ ಇಳುವರಿ ಕೊರತೆಗಣುಗುಣವಾಗಿ ಬೆಳೆ ವಿಮೆ ಪರಿಹಾರ ಲೆಕ್ಕಚಾರ ಮಾಡಿ ವಿಮಾ ಸಂಸ್ಥೆಯವರಿಂದ ಕಾಲಮಿತಿಯಲ್ಲಿ ಇತ್ಯರ್ಥಪಡಿಸಲು ಕ್ರಮ ಜರುಗಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ 2023ರ ಮುಂಗಾರು ಹಂಗಾಮಿನ ಬೆಳೆಗಳ ಅಂತಿಮ ಇಳುವರಿ ಆಧಾರದಲ್ಲಿ ನಷ್ಟಕ್ಕೆ ಅನುಗುಣವಾಗಿ ಬೆಳೆ ವಿಮೆ ಪರಿಹಾರವನ್ನು ವಿಮಾ ಸ೦ಸ್ಥೆಯವರಿ೦ದ ಕಾಲಮಿತಿಯಲ್ಲಿ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.