ಬೆಂಗಳೂರು : ರಾಜ್ಯದ ರೈತ ಸಮುದಾಯಕ್ಕೆ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದದು,ಸೆಪ್ಟೆಂಬರ್ ತಿಂಗಳಾಂತ್ಯಕ್ಕೆ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಸೆಪ್ಟೆಂಬರ್ 21 ರಿಂದ 10 ದಿನಗಳ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಇದರಿಂದ ಮುಂಗಾರು ಅವಧಿಯಲ್ಲಿ ಉಂಟಾಗಿರುವ ಶೇ. 25 ರಷ್ಟು ಮಳೆ ಕೊರತೆ ಪ್ರಮಾಣ ಸ್ವಲ್ಪ ಮಟ್ಟಿಗೆ ಸುಧಾರಿಸಲಿದೆ. ಈ ಮೂಲಕ ಮಳೆ ಇಲ್ಲದೆ ಕಂಗಾಲಾಗಿದ್ದ ರೈತ ಸಮುದಾಯಕ್ಕೆ ನೆಮ್ಮದಿಯ ಸುದ್ದಿ ಸಿಕ್ಕಂತಾಗಿದೆ.
ಈ ಬಾರಿ ಹಿಂಗಾರು ಮಳೆ ಮೇಲೆ ರೈತರು ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದು, ನಿರೀಕ್ಷೆಯಂತೆ ಈ ಬಾರಿ ಹಿಂಗಾರು ಅವಧಿಯಲ್ಲಿ ವಾಡಿಕೆ ಮಳೆ ಅಥವಾ ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.