ಬೆಂಗಳೂರು : ಕೃಷಿ ಚಟುವಟಿಕೆಯಲ್ಲಿ ನಿರತರಾಗಿರುವ ರೈತರು ಸದ್ಯ ಮುಂಗಾರು ಮಳೆಗಾಗಿ ಕಾಯುತ್ತಿದ್ದಾರೆ. ರೈತರಿಗೆ ಗುಡ್ ನ್ಯೂಸ್ ಎಂಬಂತೆ ಕರ್ನಾಟಕದಲ್ಲಿ ಜೂ.1 ರಂದೇ ಮುಂಗಾರು ಮಳೆ ಆರಂಭವಾಗಲಿದೆ.
ಹೌದು, ಜೂನ್ ಮೊದಲ ವಾರದಲ್ಲಿ ಕರ್ನಾಟಕಕ್ಕೆ ಮುಂಗಾರು ಪ್ರವೇಶಿಸಲಿದ್ದು, ಜೂನ್ 13 ರಿಂದ ಬೆಂಗಳೂರಿನಲ್ಲಿ ಮಾನ್ಸೂನ್ ಮಳೆಗಾಲ ಆರಂಭವಾಗಲಿದೆ.
ದಕ್ಷಿಣದ ರಾಜ್ಯಗಳಲ್ಲಿ ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗಲಿದ್ದು, ಕೇರಳದ ಮೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಜಾರಿಯಲ್ಲಿದೆ. ಕೇರಳದ ಹೊರತಾಗಿ, ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ಮಾಹೆಯಲ್ಲಿ ಮುಂದಿನ ಮೂರು ದಿನಗಳವರೆಗೆ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ದಕ್ಷಿಣ ಒಳನಾಡು ಕೂಡ ಇರಲಿದೆ.ಪೂರ್ವ ಮುಂಗಾರು ಮಳೆ ಕರ್ನಾಟಕದಲ್ಲಿ ಅಬ್ಬರಿಸುತ್ತಿದೆ . ಅದೇ ರೀತಿ ಮುಂಗಾರು ಮಳೆ ಕೂಡ ಕರ್ನಾಟಕದಲ್ಲಿ ಭಾರಿ ಭರ್ಜರಿಯಾಗಿ ಬೀಳಲಿದೆ ಎನ್ನಲಾಗಿದೆ.