ಬಳ್ಳಾರಿ: 10 ಎಚ್.ಪಿ. ವರೆಗಿನ ಅಕ್ರಮ ಪಂಪ್ ಸೆಟ್ ಗಳಿಗೆ ವಿದ್ಯುತ್ ಕಡಿತ ಇಲ್ಲ ಎಂದು ಇಂಧನ ಸಚಿವ ಕೆಜೆ ಜಾರ್ಜ್ ಸ್ಪಷ್ಟನೆ ನೀಡಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು ರಾಜ್ಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಅಕ್ರಮ ಪಂಪ್ ಸೆಟ್ಗಳಿವೆ. ಕೆಲವರು ಇಂತಹ ಅಕ್ರಮ ಪಂಪ್ ಸೆಟ್ಗಳ ಮೂಲಕ ನದಿ ಮತ್ತು ಕಾಲುವೆಗಳಿಂದ ಅನುಮತಿ ಇಲ್ಲದೆ ನೀರು ತೆಗೆದುಕೊಳ್ಳುತ್ತಿದ್ದಾರೆ. ಹೀಗಾಗಿ 10 ಅಶ್ವಶಕ್ತಿಗಿಂತ ಹೆಚ್ಚು ಸಾಮಥ್ರ್ಯದ ಅಕ್ರಮ ಪಂಪ್ ಸೆಟ್ಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು. ಆದರೆ, 10 ಅಶ್ವಶಕ್ತಿವರೆಗಿನ ವಿದ್ಯುತ್ ಪಂಪ್ ಸೆಟ್ಗಳಿಗೆ ಪರ್ಯಾಯ ವ್ಯವಸ್ಥೆ ಮಾಡುವವರೆಗೆ ವಿದ್ಯುತ್ ಪೂರೈಕೆ ಮುಂದುವರಿಯಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.
ನದಿ ಮತ್ತು ಕಾಲುವೆಗಳಿಂದ ಅಕ್ರಮ ಪಂಪ್ ಸೆಟ್ಗಳ ಮೂಲಕ ನೀರು ಮೇಲೆತ್ತುವವರ ವಿದ್ಯುತ್ ಸಂಪರ್ಕ ಕಡಿತಗೊಳಿಸುವಂತೆ ಜಲ ಸಂಪನ್ಮೂಲ ಇಲಾಖೆಯಿಂದ ಬೇಡಿಕೆ ಬಂದಿದೆ. ಆದರೆ, 10 ಅಶ್ವಶಕ್ತಿವರೆಗಿನ ಪಂಪ್ ಸೆಟ್ಗಳ ಸಂಪರ್ಕ ಕಡಿತಗೊಳಿಸುವುದಿಲ್ಲ. ಅದಕ್ಕಿಂತ ಹೆಚ್ಚು ಅಶ್ವಶಕ್ತಿಯ ಪಂಪ್ಗಳನ್ನು ಬಳಸುವುದಕ್ಕೆ ಅವಕಾಶವಿಲ್ಲ. ವಿದ್ಯುತ್ ಪಂಪ್ ಸೆಟ್ಗಳಿಗೆ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಲಾಗುವುದು. ಡೀಸೆಲ್ ಪೆಪ್ ಸೆಟ್ಗಳ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗಳ ಮಟ್ಟದಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.