alex Certify ರೈತರಿಗೆ ಗುಡ್ ನ್ಯೂಸ್ : ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ, ಬಿಳಿಜೋಳ ಖರೀದಿ ಕೇಂದ್ರ ಪ್ರಾರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಗುಡ್ ನ್ಯೂಸ್ : ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ, ಬಿಳಿಜೋಳ ಖರೀದಿ ಕೇಂದ್ರ ಪ್ರಾರಂಭ

2023-24ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಎಫ್‍ಎಕ್ಯೂ ಗುಣಮಟ್ಟದ ಭತ್ತ, ಬಿಳಿಜೋಳ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿರುತ್ತದೆ. ಭತ್ತ ಅಳ್ನಾವರ, ಕಲಘಟಗಿ ತಾಲೂಕುಗಳಲ್ಲಿ ಹಾಗೂ ಬಿಳಿಜೋಳ ಧಾರವಾಡ, ಹುಬ್ಬಳ್ಳಿ ತಾಲೂಕಿನ ಖರೀದಿ ಕೇಂದ್ರಗಳಲ್ಲಿ ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳುವಂತೆ   ಜಿಲ್ಲಾಧಿಕಾರಿ ಗುರುದತ್ತ ಹೆಗಡೆಯವರು ತಿಳಿಸಿದ್ದಾರೆ.

 ಈ ಕುರಿತು ಪ್ರಕಟಣೆ ನೀಡಿರುವ ಅವರು 2023-24ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ, ಬಿಳಿಜೋಳ ಮತ್ತು ರಾಗಿ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿರುತ್ತದೆ. ಸದರಿ ತಾಲ್ಲೂಕುಗಳ ಸುತ್ತಮುತ್ತಲೂ ಭತ್ತ, ಬಿಳಿಜೋಳ ಮತ್ತು ರಾಗಿ ಬೆಳೆದ ರೈತರು ತಮ್ಮ ವ್ಯಾಪ್ತಿಗೆ ಬರುವ ಖರೀದಿ ಕೇಂದ್ರಗಳಲ್ಲಿ ತಮ್ಮ ಹೆಸರನ್ನು ನೊಂದಣಿ ಮಾಡಿಕೊಳ್ಳಬೇಕು.

ಭತ್ತ ಮತ್ತು ಬಿಳಿಜೋಳ ಖರೀದಿಗೆ ಮಾರ್ಗಸೂಚಿ : ಸರ್ಕಾರದಿಂದ ನೇಮಿಸಲ್ಪಟ್ಟ ಸಂಗ್ರಹಣಾ ಏಜೆನ್ಸಿಗಳು ಭತ್ತ ಖರೀದಿ ಹಂತದಲ್ಲಿ ಕೇಂದ್ರ ಸರ್ಕಾರವು ನಿಗದಿಪಡಿಸಿದ ಮಾನದಂಡಗಳನ್ವಯ ಎಫ್‍ಎಕ್ಯೂ ಗುಣಮಟ್ಟವನ್ನು ದೃಢೀಕರಿಸಲು ಈ ಕೆಳಗಿನಂತೆ ಕ್ರಮವಹಿಸಬೇಕು. ರೈತರಿಂದ ಭತ್ತವನ್ನು ಖರೀದಿಸಲು ತೆರೆಯಲಾಗಿರುವ ಪ್ರತಿ ಖರೀದಿ ಕೇಂದ್ರಕ್ಕೆ ಕೃಷಿ ಇಲಾಖೆ ವತಿಯಿಂದ ಗ್ರೇಡರ್‍ಗಳನ್ನು ನೇಮಿಸಬೇಕು. ಖರೀದಿ ಏಜೆನ್ಸಿಯ ಹಿರಿಯ ಅಧಿಕಾರಿಗಳು ತಮ್ಮ ಸಂಸ್ಥೆಗೆ ವಹಿಸಿರುವ ಜಿಲ್ಲೆಗಳಲ್ಲಿನ ಕಾರ್ಯಪ್ರಗತಿ ಬಗ್ಗೆ

ಆಗ್ಗಿಂದಾಗ್ಗೆ ಮೇಲುಸ್ತುವಾರಿ ತಪಾಸಣೆ ಕೈಗೊಳ್ಳಬೇಕು. ಭತ್ತವನ್ನು ಪ್ರತಿ ರೈತರಿಂದ ಉತ್ಪಾದನೆಗೆ ಅನುಗುಣವಾಗಿ ಪ್ರತಿ ಏಕರೆಗೆ 25 ಕ್ವಿಂಟಲ್‍ನಂತೆ ಗರಿಷ್ಟ 40 ಕ್ವಿಂಟಲ್ ಮೀರದಂತೆ ಖರೀದಿಸತಕ್ಕದ್ದು.

 ಸರ್ಕಾರವು ನಿಗದಿಪಡಿಸಿರುವ ಪ್ರಮಾಣವನ್ನು ಮೀರಿ ಹೆಚ್ಚುವರಿಯಾಗಿ ಭತ್ತವನ್ನು ಖರೀದಿಸುವಂತಿಲ್ಲ. ಯಾವುದೇ ಜಿಲ್ಲೆ, ತಾಲ್ಲೂಕಿನಲ್ಲಿ ಭತ್ತದ ಹಲ್ಲಿಂಗ್ ಕಾರ್ಯವನ್ನು ಕೈಗೊಳ್ಳಲು ಅಕ್ಕಿ ಗಿರಣಿಗಳು ನೊಂದಾಯಿಸಿಕೊಳ್ಳದಿದ್ದಲ್ಲಿ, ಸದರಿ ಜಿಲ್ಲೆಯಲ್ಲಿ ಸಂಗ್ರಹಿಸಿದ ಭತ್ತವನ್ನು ಪಕ್ಕದ ಜಿಲ್ಲೆಯ ನೊಂದಾಯಿತ ಅಕ್ಕಿ ಗಿರಣಿಗಳಿಗೆ ಸಾಗಾಣಿಕೆ ಮಾಡಿ ಭತ್ತದ ಹಲ್ಲಿಂಗ್ ಹಾಗೂ ಸಾರವರ್ಧಿತ ಕಾರ್ಯವನ್ನು ಕೈಗೊಳ್ಳಲು ಕ್ರಮವಹಿಸಬೇಕು. ಭತ್ತವನ್ನು ಸರಬರಾಜು ಮಾಡಿದ ರೈತರಿಗೆ 15 ದಿನದೊಳಗೆ ಅವರ ಬ್ಯಾಂಕ ಖಾತೆಗಳಿಗೆ ಹಣವನ್ನು ನೇರನಗದು ವರ್ಗಾವಣೆ (ಡಿಬಿಟಿ) ಮುಖಾಂತರ ಮಾಡತಕ್ಕದ್ದು. ಸರ್ಕಾರದಿಂದ ನೇಮಿಸಲ್ಪಟ್ಟ ಸಂಗ್ರಹಣಾ ಏಜೆನ್ಸಿಗಳು ಕೇಂದ್ರ ಸರ್ಕಾರವು ನಿಗದಿಪಡಿಸಿದ ಮಾನದಂಡಗಳನ್ವಯ ಬಿಳಿಜೋಳದ ಖರೀದಿ ಹಚಿತದಲ್ಲಿ ಎಫ್‍ಎಕ್ಯೂ ಗುಣಮಟ್ಟವನ್ನು ದೃಢೀಕರಿಸಲು ಕ್ರಮವಹಿಸಬೇಕು.

ರೈತರಿಂದ ಬಿಳಿಜೋಳವನ್ನು ಖರೀದಿಸಲು ತೆರೆಯಲಾಗಿರುವ ಖರೀದಿ ಕೇಂದ್ರಕ್ಕೆ ಕೃಷಿ ಇಲಾಖೆ ವತಿಯಿಂದ ಗ್ರೇಡರ್‍ಗಳನ್ನು ನೇಮಿಸುವದು. ಪ್ರತಿ ಖರೀದಿ ಕೇಂದ್ರಗಳಲ್ಲಿ ಕೃಷಿ ಇಲಾಖೆಯ ಗ್ರೇಡರ್‍ಳೊಂದಿಗೆ ಆಹಾರಧಾನ್ಯಗಳ ಗುಣಮಟ್ಟವನ್ನು ಜಂಟಿಯಾಗಿ ದೃಢೀಕರಿಸಲು ಮೂರನೇ ವ್ಯಕ್ತಿ ಗುಣಮಟ್ಟ ಪರೀಕ್ಷರನ್ನು ನೇಮಿಸಲು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತವು ಖರೀದಿ ಏಜೆನ್ಸಿಗಳ ಪರವಾಗಿ ಅಲ್ಪಾವಧಿ ಟೆಂಡರ್ ಕರೆಯಬೇಕು. ಖರೀದಿ ಏಜೆನ್ಸಿಯ ಹಿರಿಯ ಅಧಿಕಾರಿಗಳು ತಮ್ಮ ಸಂಸ್ಥೆಗೆ ವಹಿಸಿರುವ ಜಿಲ್ಲೆಗಳಲ್ಲಿ ಕಾರ್ಯ ಪ್ರಗತಿ ಬಗ್ಗೆ ಆಗ್ಗಿಂದಾಂಗ್ಲೆ ಮೇಲುಸ್ತುವಾರಿ ತಪಾಸಣೆ ಕೈಗೊಳ್ಳಬೇಕು. ಜೋಳ ಸಂಗ್ರಹಣೆಗೆ ಅಗತ್ಯವಿರುವ ಗೋಣಿ ಚೀಲಗಳನ್ನು 2022-23ನೇ ಸಾಲಿನ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಆಹಾರಧಾನ್ಯ ಸಂಗ್ರಹಣೆಗೆ ಬಳಸಿಕೊಂಡು ಬಾಕಿ ಉಳಿದ ಗೋಣಿ ಚೀಲಗಳನ್ನು ಜೋಳ ಸಂಗ್ರಹಣೆಗೆ ಉಪಯೋಗಿಸಿಕೊಳ್ಳತಕ್ಕದ್ದು. ಪ್ರತಿ ರೈತರಿಂದ ಬಿಳಿಜೋಳವನ್ನು ಉತ್ಪಾದನೆ ಅನುಗುಣವಾಗಿ ಪ್ರತಿ ಏಕರೆಗೆ 10 ಕ್ವಿಂಟಲ್‍ನಂತೆ ಎಲ್ಲಾ ರೈತರಿಂದ ಅವರು ಹೊಂದಿರುವ ಜಮೀನಿಗೆ ಅನುಗುಣವಾಗಿ ಖರೀದಿಸುವುದು. ಸರ್ಕಾರ ನಿಗದಿಪಡಿಸಿರುವ ಪ್ರಮಾಣವನ್ನು ಮೀರಿ ಹೆಚ್ಚುವರಿಯಾಗಿ ಬಿಳಿಜೋಳವನ್ನು ಖರೀದಿಸುವಂತಿಲ್ಲ.

ರಾಜ್ಯದಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯ ಅನುಷ್ಠಾನದಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರು ರಾಜ್ಯಮಟ್ಟದ ನೋಡಲ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಲು ನೇಮಿಸಲಾಗಿರುತ್ತದೆ.

ಆಹಾರ ಧಾನ್ಯದ ವಿಧ : ಭತ್ತ (ಸಾಮಾನ್ಯ) –2,500, ಭತ್ತ (ಗ್ರೇಡ್ ಎ)-2,800, ಬಿಳಿಜೋಳ ಹೈಬ್ರಿಡ್–3,180, ಬಿಳಿಜೋಳ ಮಾಲ್ಡಂಡಿ -3,225  ಸರ್ಕಾರವು ಪ್ರತಿ ಕ್ವಿಂಟಾಲ್‍ಗೆ ಬೆಂಬಲ ಬೆಲೆ ಘೋಷಿಸಿದೆ.

  ರಾಗಿಯ ಬೆಳೆ ಹೊರತಾಗಿ ಜಿಲ್ಲೆಯ ರೈತರು ತಾವು ಬೆಳೆದ ಭತ್ತ ಮತ್ತು ಬಿಳಿಜೋಳವನ್ನು ಡಿಸೆಂಬರ್ 01, 2023 ರಿಂದ ಮಾರ್ಚ್ 31, 2024 ರೊಳಗಾಗಿ ಈಗಾಗಲೇ ಸ್ಥಾಪಿಸಲಾದ ಖರೀದಿ ಕೇಂದ್ರಗಳಿಗೆ ಒದಗಿಸಿ ಇದರ ಸದುಪಯೋಗವನ್ನು ಪಡೆದುಕೊಳ್ಳಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಖರೀದಿ ಕೇಂದ್ರಗಳಿ ಬೇಟಿ ನೀಡುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...