alex Certify ರೈತರಿಗೆ ಗುಡ್ ನ್ಯೂಸ್ : ಖಾಸಗಿ ಜಮೀನಿನ `ಬಂಡಿದಾರಿ’, `ಕಾಲುದಾರಿ’ಗಳ ಒತ್ತುವರಿ ತೆರವುಗೊಳಿಸಲು ರಾಜ್ಯ ಸರ್ಕಾರದಿಂದ ಸುತ್ತೋಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಗುಡ್ ನ್ಯೂಸ್ : ಖಾಸಗಿ ಜಮೀನಿನ `ಬಂಡಿದಾರಿ’, `ಕಾಲುದಾರಿ’ಗಳ ಒತ್ತುವರಿ ತೆರವುಗೊಳಿಸಲು ರಾಜ್ಯ ಸರ್ಕಾರದಿಂದ ಸುತ್ತೋಲೆ

 

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರೈತರು ವ್ಯವಸಾಯದ ಉದ್ದೇಶಕ್ಕಾಗಿ ತಿರುಗಾಡಲು ಬಳಸುವ  ಖಾಸಗಿ ಜಮೀನು ಗಳಲ್ಲಿ ಕಾಲುದಾರಿ, ಬಂಡಿದಾರಿ ಅಥವಾ ಸೌಲಭ್ಯ ಒದಗಿಸುವ ಸಲುವಾಗಿ ಕ್ರಮ ವಹಿಸುವ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ವಿಷಯ:ರೈತರು ವ್ಯವಸಾಯದ ಉದ್ದೇಶಗಳಿಗಾಗಿ ತಿರುಗಾಡಲು ಬಳಸುವ ಖಾಸಗಿ ಜಮೀನುಗಳಲ್ಲಿ ಕಾಲುದಾರಿ, ಬಂಡಿದಾರಿ ಅಥವಾ ಸೌಲಭ್ಯ ಒದಗಿಸುವ ಸಲುವಾಗಿ ಕ್ರಮವಹಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಸುತ್ತೋಲೆ ಹೊರಡಿಸಿದೆ.

ರಾಜ್ಯದಲ್ಲಿ ರೈತರು ವ್ಯವಸಾಯದ ಉದ್ದೇಶಗಳಿಗಾಗಿ ಬಳಸುವ ಕೃಷಿ ಸಲಕರಣೆಗಳನ್ನು ಸಾಗಿಸಲು ಅನ್ಯ ಭೂಮಾಲೀಕರ ಖಾಸಗಿ ಜಮೀನುಗಳಲ್ಲಿ ತಿರುಗಾಡಲು ‘ದಾರಿ’ ಸಮಸ್ಯೆ ಇದ್ದು ಬಳಕೆದಾರ ರೈತರುಗಳಿಗೆ ತೊಂದರೆಗಳಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ‘ದಾರಿ’ ಸಮಸ್ಯೆ ಬಹುಕಾಲದಿಂದಲೂ ಇದ್ದು ಅಕ್ಕಪಕ್ಕದ ಜಮೀನುಗಳ ರೈತರು ಕೆಲವು ಖಾಸಗಿ ಜಮೀನುಗಳನ್ನು ದಾಟಿಕೊಂಡು ಕೃಷಿ ಪೂರಕ ಚಟುವಟಿಕೆಗಳನ್ನು ಜರುಗಿಸಲು ಹಾಗೂ ಬೆಳೆದ ಫಸಲನ್ನು ಹೊರತರಲಾಗದೆ ನಮ್ಮ ಹೊಂದುತ್ತಿರುವುದು ಕೆಲವು ಮಾಧ್ಯಮಗಳಿಂದ ತಿಳಿದು ಬಂದಿರುತ್ತದೆ ಹಾಗೂ ಈ ಬಗ್ಗೆ ಸಾರ್ವಜನಿಕರಿಂದ ಮನವಿ/ದೂರುಗಳು ಸ್ವೀಕೃತವಾಗಿರುತ್ತವೆ.

ಗ್ರಾಮ ನಕಾಶೆ ಕಂಡ ದಾರಿಗಳಲ್ಲಿ ಬಳಕೆದಾರ ರೈತರು ತಿರುಗಾಡಲು ಅವಕಾಶವಿದ್ಯಾಗ್ಯೂ ಕೆಲವು ಭೂಮಾಲೀಕರು ಬಳಕೆದಾರ ರೈತರುಗಳಿಗೆ ತಿರುಗಾಡಲು ಅಡ್ಡಿಪಡಿಸುತ್ತಿರುವುದು ಅಥವಾ ಅಂತಹ ಜಾಗಗಳನ್ನು ಮುಚ್ಚಿರುವುದು ಹಾಗೂ ರೈತರು ಬಹುಕಾಲದಿಂದಲೂ ಬಳಸುವ ದಾರಿಗಳಲ್ಲಿ ತಿರುಗಾಡಲು ಕೆಲವು ರೈತರ ಮಧ್ಯದ ವೈಯಕ್ತಿಕ ದ್ವೇಷ/ಆಸೂಯೆಗಳು ಮತ್ತು ಹೊಂದಾಣಿಕೆಯ ಕೊರತೆಯಿಂದಾಗಿ ಬಳಕೆದಾರ ರೈತರ ತೊಂದರೆಗಳಿಗೆ ಬಹುತೇಕ ಕಾರಣಗಳಾಗಿರುವುದು ಕಂಡುಬರುತ್ತದೆ.

ಕರ್ನಾಟಕ ಭೂ ಕಂದಾಯ ನಿಯಮಗಳು, 1966ರ ನಿಯಮ 59 ರಲ್ಲಿ ‘ದಾರಿಯ ಹಕ್ಕುಗಳು ಮತ್ತು ಇತರ ಅನುಭೋಗದ ಹಕ್ಕುಗಳ ಬಗ್ಗೆ ತಿಳಿಸಲಾಗಿದ್ದು ಸಂಬಂಧಪಟ್ಟ ಜಮೀನುಗಳ ಭಾಗಿದಾರರು ಒಪ್ಪಿರುವಂತಹ ಸಂದರ್ಭದಲ್ಲಿ ಹಕ್ಕುಗಳ ದಾಖಲೆ ರಿಜಿಸ್ಟರ್‌ನಲ್ಲಿ ನಮೂದು ಮಾಡಲು ಅವಕಾಶವಿದೆ.

The Indian Easement Act, 1882 ರಂತೆ ಪ್ರತಿ ಜಮೀನು ಮಾಲೀಕರು ಅಥವಾ ಜಮೀನಿನ ಅನುಭವದಲ್ಲಿರುವವರು ಅವರ ಭೂಮಿಯನ್ನು ಪ್ರವೇಶಿಸುವ ಹಕ್ಕು ಮತ್ತು ವಹಿವಾಟಿನ (Easement) ಹಕ್ಕನ್ನು ಹೊಂದಿದ್ದು, ಇದಕ್ಕೆ ಬಾಜುದಾರರಿಂದ ಯಾವುದೇ ಹಸ್ತಕ್ಷೇಪಕ್ಕೆ ಅಥವಾ ಈ ಬಗ್ಗೆ ಸದರಿ ಹಕ್ಕನ್ನು ಕ್ಷೀಣಿಸುವುದಕ್ಕೆ ಸಾಧ್ಯವಿರುವುದಿಲ್ಲ ಎಂಬುದಾಗಿ ತಿಳಿಸಲಾಗಿದ್ದು, ಈ ನಿಟ್ಟಿನಲ್ಲಿ (b) ad se, Code of Criminal Procedure, 19730 0 147 ರನ್ವಯ ಭೂಮಿ ಮತ್ತು ನೀರಿನ ಹಕ್ಕಿನ ಉಪಯೋಗದ ಕುರಿತು ಸ್ಥಳೀಯ ಶಾಂತಿಗೆ ಭಂಗ ಉಂಟಾಗುವ ಸಂದರ್ಭಗಳಲ್ಲಿ ಅದನ್ನು ನಿವಾರಿಸಲು ಕಾನೂನು ರೀತ್ಯಾ ತಹಶೀಲ್ದಾರ್ ರವರು ತಾಲ್ಲೂಕು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಆಗಿ ಕ್ರಮವಹಿಸುವ ಅಧಿಕಾರ ಹೊಂದಿರುತ್ತಾರೆ.

ಅದರಂತೆ, ತಾಲ್ಲೂಕಿನ ತಹಶೀಲ್ದಾರ್ಗಗಳು ನಕಾಶೆ ಕಂಡ ಕಾಲುದಾರಿ, ಬಂಡಿದಾರಿ ಅಥವಾ ರಸ್ತೆಗಳಲ್ಲಿ ಅನ್ನ ಕೃಷಿ ಬಳಕೆದಾರರು ತಿರುಗಾಡಲು ಅವಕಾಶ ನೀಡದೆ ಅಡ್ಡಿಪಡಿಸುವಂತಹ ಅಥವಾ ಬಳಸಲು ಮುಚ್ಚಿರುವಂತಹ ಸಂದರ್ಭದಲ್ಲಿ ಅವುಗಳನ್ನು ತೆರವುಗೊಳಿಸಿ ಅಂತಹ ತಿರುಗಾಡಲು ದಾರಿಗಳನ್ನು ಸುಗಮಗೊಳಿಸಲು ಕ್ರಮವಹಿಸುವಂತೆ ಸೂಚಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...