ಬೆಂಗಳೂರು : ರಾಜ್ಯ ಸರ್ಕಾರವು ಬರದಿಂದ ತತ್ತರಿರುವ ರೈತರಿಗೆ ನೆಮ್ಮದಿಯ ಸುದ್ದಿ ನೀಡಿದ್ದು, ನೀರಾವರಿ ಪಂಪ್ ಸೆಟ್ ಗಳ ವಿದ್ಯುತ್ ಸಂಪರ್ಕಕ್ಕೆ ಸಂಬಂಧಿಸಿದ ಆದೇಶವನ್ನು ಹಿಂಪಡೆಯಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ರಾಜ್ಯ ಸರ್ಕಾರದ ಹೊಸ ಆದೇಶದಂತೆ ರೈತರು ನೀರಾವರಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಂಪರ್ಕ ಪಡೆಯಲು, ಟ್ರಾನ್ಸ್ ಫಾರ್ಮರ್ ಗಳ ದುರಸ್ತಿಗೆ ಲಕ್ಷಾಂತರ ರೂ. ವೆಚ್ಚ ಮಾಡಬೇಕಾಗಿದೆ. ಇದಕ್ಕೆ ರಾಜ್ಯಾದ್ಯಂತ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಆದೇಶ ವಾಪಸ್ ಪಡೆಯಲು ನಿರ್ಧರಿಸಿದೆ ಎನ್ನಲಾಗಿದೆ.
ಇಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ಈ ಬಗ್ಗೆ ವಿಸ್ತೃತ ಚರ್ಚೆ ನಡೆಯುವ ಸಾಧ್ಯತೆ ಇದ್ದು, ರಾಜ್ಯ ಸರ್ಕಾರ ನೀರಾವರಿ ಪಂಪ್ ಸೆಟ್ ಗಳಿಗೆ ವಿಧಿಸಿರುವ ಹೊಸ ನಿಯಮಗಳ ಆದೇಶವನ್ನು ವಾಪಸ್ ಪಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.