ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ನೆಟೆ ರೋಗದಿಂದ ತೊಗರಿ ಬೆಳೆ ನಾಶವಾಗಿ ನಷ್ಟ ಅನುಭವಿಸಿದ ರೈತರಿಗೆ ಪರಿಹಾರ ನೀಡಲು 74.6ಕೋಟಿ ರೂ. ಬಿಡುಗಡೆ ಮಾಡಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.
2023-24 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕಲಬುರಗಿ, ಬೀದರ್, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ತೊಗರಿ ಬೆಳೆಗೆ ನೆಟೆ ರೋಗ ಕಾಣಿಸಿಕೊಂಡು ಬೆಲೆ ನಷ್ಟವುಂಟಾಗಿ ರೈತರು ನಷ್ಟ ಅನುಭವಿಸಿದ್ದರು. ಹೀಗಾಗಿ ರಾಜ್ಯ ಸರ್ಕಾರವು ರೈತರಿಗೆ ಪರಿಹಾರ ನೀಡಲು 233 ಕೋಟಿ ರೂ. ಮೀಸಲಿಡಲಾಗಿತ್ತು. ಅದರಲ್ಲಿ ಈಗಾಗಲೇ ಎರಡು ಕಂತಿನಲ್ಲಿ 148.33 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿತ್ತು.
ಇದೀಗ ಮತ್ತೆ ಬಾಕಿ ಪರಿಹಾರದ ಮೊತ್ತವಾದ 74.67 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.