
ಬೆಂಗಳೂರು : 2023-24ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಕಾರ್ಯಕ್ರಮ, ಎಸ್‍ಎಂಎಎಂ ಯೋಜನೆಯಡಿ ತೋಟಗಾರಿಕೆಯಲ್ಲಿ ಯಾಂತ್ರೀಕರಣ ಕಾರ್ಯಕ್ರಮಗಳಡಿ ಸಹಾಯಧನ ನೊಂದಣಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಆಸಕ್ತ ರೈತರು ನ.16 ರಿಂದ 24ನೇ ತಾರೀಖಿನೊಳಗೆ ಅರ್ಜಿ ಸಲ್ಲಿಸಿ ನೋಂದಣಿ ಮಾಡಿಕೊಳ್ಳಬಹುದಾಗಿರುತ್ತದೆ. ಹನಿ ನೀರಾವರಿ ಕಾರ್ಯಕ್ರಮದಡಿ 5 ಹೆಕ್ಟೇರ್‍ವರೆಗೆ ಸಹಾಯಧನ ನೀಡಲು ಅವಕಾಶವಿರುತ್ತದೆ. ತೋಟಗಾರಿಕೆಯಲ್ಲಿ ಯಾಂತ್ರೀಕರಣ ಕಾರ್ಯಕ್ರಮದಡಿ ಪ್ರಥಮ ಆದ್ಯತೆಯಲ್ಲಿ ಅಡಿಕೆ ದೋಟಿಯನ್ನು ಪರಿಗಣಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖಾ ಕಚೇರಿಯನ್ನು ಸಂಪರ್ಕಿಸಬಹುದು ಅಥವಾ ಹೋಬಳಿವಾರು ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಬಹುದೆಂದು ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.