ಬೆಂಗಳೂರು : ತೋಟಗಾರಿಕೆ ಇಲಾಖೆಯಿಂದ 2023-24 ನೇ ಸಾಲಿನ ರಾಷ್ಟ್ರೀಯ ಕೃಷಿ ವಿಸ್ತರಣೆ ಮತ್ತು ತಂತ್ರಜ್ಞಾನ ಅಭಿಯಾನದ ಕೃಷಿ ಯಾಂತ್ರೀಕರಣ ಕಾರ್ಯಕ್ರಮ ಮತ್ತು ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ತೋಟಗಾರಿಕೆಯಲ್ಲಿ ವಿನೂತನ ತಂತ್ರಜ್ಞಾನ ಮತ್ತು ಯಂತ್ರೋಪಕರಣಗಳಿಗೆ ಸಹಾಯಧನ ನೀಡಲು ಕೃಷಿ ಯಂತ್ರೋಪಕರಣ ಖರೀದಿಸಲು ಇಚ್ಛಿಸುವ ತೋಟಗಾರಿಕೆ ಬೆಳೆ ಬೆಳೆಯುವ ರೈತರಿಂದ ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ರೈತರು ತಮಗೆ ಅಗತ್ಯವೆನಿಸಿದ ಮತ್ತು ಇಚ್ಚೆಪಟ್ಟ ಅನುಮೋದಿತ ಸಂಸ್ಥೆಗಳಿಂದ ಮಾತ್ರ ಉಪಕರಣ, ಯಂತ್ರಗಳನ್ನು ಖರೀದಿಸಲು ಸಂಪೂರ್ಣವಾಗಿ ಸ್ವತಂತ್ರರಾಗಿರುತ್ತಾರೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಣ್ಣ ಮತ್ತು ಅತೀ ಸಣ್ಣ ಹಾಗೂ ಮಹಿಳಾ ರೈತರು ಖರೀದಿಸುವ ಕೃಷಿ ಯಂತ್ರೋಪಕರಣಗಳಿಗೆ ಶೇ. 50 ರ ಸಹಾಯಧನ ಹಾಗೂ ಇತರೆ ವರ್ಗದ ಫಲಾನುಭವಿಗಳಿಗೆ ಶೇ.40 ರ ಸಹಾಯಧನದ ಸೌಲಭ್ಯವಿರುತ್ತದೆ. ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬಹುದೆಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.