ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 14 ನೇ ಕಂತನ್ನು ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 27, 2023 ರ ಇಂದು 8.5 ಕೋಟಿಗೂ ಹೆಚ್ಚು ರೈತರಿಗೆ ಬಿಡುಗಡೆ ಮಾಡುವ ಸಾಧ್ಯತೆ ಇದೆ.
ಹೌದು, ಪಿಎಂ ಕಿಸಾನ್ 14ನೇ ಕಂತಿನ ಹಣವನ್ನು ಅನ್ನದಾತರ ಬ್ಯಾಂಕ್ ಖಾತೆಗೆ ಜುಲೈ 28ರಂದು ಜಮಾ ಮಾಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ಇತ್ತೀಚೆಗೆ ಈ ವಿಷಯವನ್ನು ಬಹಿರಂಗಪಡಿಸಿದೆ. ಈ ಯೋಜನೆಯು ಭೂ ಹಿಡುವಳಿದಾರ ರೈತ ಕುಟುಂಬಗಳಿಗೆ ವರ್ಷಕ್ಕೆ 6,000 ರೂ.ಗಳ ಆರ್ಥಿಕ ಪ್ರಯೋಜನವನ್ನು ನೀಡುತ್ತದೆ, ಇದನ್ನು ತಲಾ 2,000 ರೂ.ಗಳ ಮೂರು ಸಮಾನ ಕಂತುಗಳಲ್ಲಿ ಪಾವತಿಸಲಾಗುತ್ತದೆ.
ಪಿಎಂ-ಕಿಸಾನ್ ಯೋಜನೆಯು ಆರಂಭದಲ್ಲಿ 2 ಹೆಕ್ಟೇರ್ ವರೆಗೆ ಭೂಮಿಯನ್ನು ಹೊಂದಿರುವ ಸಣ್ಣ ಮತ್ತು ಅತಿಸಣ್ಣ ರೈತರಿಗೆ (ಎಸ್ಎಂಎಫ್) ಮೀಸಲಾಗಿತ್ತು ಆದರೆ ಯೋಜನೆಯ ವ್ಯಾಪ್ತಿಯನ್ನು ಜೂನ್ 01, 2019 ರಿಂದ ಎಲ್ಲಾ ಭೂ ಹಿಡುವಳಿ ರೈತರಿಗೆ ವಿಸ್ತರಿಸಲಾಯಿತು.ಪಿಎಂ-ಕಿಸಾನ್ ಯೋಜನೆಯ 13 ನೇ ಕಂತನ್ನು ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿಯಲ್ಲಿ ಬಿಡುಗಡೆ ಮಾಡಿದರು.
ಪಿಎಂ ಕಿಸಾನ್ ಸಮ್ಮಾನ್ ನಿಧಿ ಸ್ಥಿತಿ ಪರಿಶೀಲನೆ ಹಂತಗಳು
ಪಿಎಂ ಕಿಸಾನ್ ಸಮ್ಮಾನ್ ನಿಧಿಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ- pmkisan.gov.in
ಮುಖಪುಟದಲ್ಲಿರುವ ‘ಫಾರ್ಮರ್ಸ್ ಕಾರ್ನರ್'( Farmers Corner) ವಿಭಾಗದ ಮೇಲೆ ಕ್ಲಿಕ್ ಮಾಡಿ
‘ಫಲಾನುಭವಿ ಸ್ಥಿತಿ’ (Beneficiary Status’) ಟ್ಯಾಬ್ ಮೇಲೆ ಕ್ಲಿಕ್ ಮಾಡಿ
ನೋಂದಾಯಿತ ಆಧಾರ್ ಸಂಖ್ಯೆ ಅಥವಾ ಬ್ಯಾಂಕ್ ಖಾತೆ ಸಂಖ್ಯೆಯನ್ನು ನಮೂದಿಸಿ.
Get Data’ ಮೇಲೆ ಕ್ಲಿಕ್ ಮಾಡಿ