alex Certify ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ಮುಂಗಾರು ಋತುವಿನಲ್ಲಿ `ಆಹಾರ ಧಾನ್ಯ’ಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ಮುಂಗಾರು ಋತುವಿನಲ್ಲಿ `ಆಹಾರ ಧಾನ್ಯ’ಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಣೆ

ಬೆಂಗಳೂರು : 2023-24ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ, ರಾಗಿ ಮತ್ತು ಜೋಳ ಆಹಾರಧಾನ್ಯಗಳಿಗೆ ಸರ್ಕಾರ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಿಸಿದೆ.

ಭತ್ತ(ಸಾಮಾನ್ಯ) ಪ್ರತಿ ಕ್ವಿಂಟಾಲ್‌ಗೆ ದರ ರೂ. 2183/-, ಭತ್ತ(ಗ್ರೇಡ್-ಎ) ಪ್ರತಿ ಕ್ವಿಂಟಾಲ್‌ಗೆ ದರ ರೂ.2203/-, ಬಿಳಿಜೋಳ(ಹೈಬ್ರಿಡ್)  ಪ್ರತಿ ಕ್ವಿಂಟಾಲ್‌ಗೆ ದರ ರೂ.3180/-, ಬಿಳಿಜೋಳ ಮಾಲ್ದಂಡಿ ಪ್ರತಿ ಕ್ವಿಂಟಾಲ್‌ಗೆ ದರ ರೂ.3225/-, ರಾಗಿ ಪ್ರತಿ ಕ್ವಿಂಟಾಲ್‌ಗೆ ದರ ರೂ.3846/- ರಂತೆ ಸರ್ಕಾರ ಬೆಂಬಲ ಬೆಲೆಯನ್ನು ನಿಗದಿಪಡಿಸಿದೆ.

ಮುಂಗಾರು  ಭತ್ತ ಖರೀದಿಗೆ ಸಂಬಂಧಿಸಿದಂತೆ, ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮ ನಿಯಮಿತ ಇವರನ್ನು ಕೊಪ್ಪಳ ಜಿಲ್ಲೆಗೆ ಖರೀದಿ ಏಜೆನ್ಸಿಯನ್ನಾಗಿ ನೇಮಕ ಮಾಡಲಾಗಿದೆ. ಭತ್ತ ಖರೀದಿಗೆ ರೈತರಿಂದ ನೋಂದಣಿ ಕಾರ್ಯವನ್ನು ನವೆಂಬರ್ 15 ರಿಂದ ಆರಂಭಿಸಲಾಗಿದ್ದು, ಡಿಸೆಂಬರ್ 31 ರವರೆಗೆ ನೋಂದಣಿಗೆ ಅವಕಾಶ ನೀಡಲಾಗಿದೆ.

ಕೇಂದ್ರ ಸರ್ಕಾರವು ನಿಗದಿಪಡಿಸಿದ  ಎಫ್‌ಎಕ್ಯೂ ಗುಣಮಟ್ಟದ ಭತ್ತವನ್ನು ಪ್ರತಿ ರೈತರಿಂದ ಪ್ರತಿ ಎಕರೆಗೆ 25 ಕ್ವಿಂಟಾಲ್‌ನಂತೆ ಗರಿಷ್ಠ 40 ಕ್ವಿಂಟಾಲ್ ಮೀರದಂತೆ ಖರೀದಿಸಲಾಗುವುದು ಹಾಗೂ ಭತ್ತವನ್ನು ಸರಬರಾಜು ಮಾಡಿದ ರೈತರಿಗೆ 15 ದಿನಗಳೊಳಗೆ ಅವರ ಬ್ಯಾಂಕ್ ಖಾತೆಗಳಿಗೆ ಹಣವನ್ನು ನೇರನಗದು ವರ್ಗಾವಣೆ (ಡಿಬಿಟಿ) ಮುಖಾಂತರ  ಮಾಡಲಾಗುವ್ಯದು ಎಚಿದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...