ಬೆಂಗಳೂರು : ಗೌರಿ- ಗಣೇಶ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಕೆಎಸ್ ಆರ್ ಟಿಸಿ ಯಿಂದ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ 200 ಕ್ಕೂ ಹೆಚ್ಚು ಬಿಎಂಟಿಸಿ ಬಸ್ ಗಳ ವ್ಯವಸ್ಥೆ ಮಾಡಿದೆ.
ನಾಳೆ ಗಣೇಶ ಚತುರ್ಥಿ ಇರುವುದರಿಂದ ಸರ್ಕಾರಿ ರಜೆಯಿದೆ. ಈ ಹಿನ್ನೆಲೆ ತಮ್ಮ ತಮ್ಮ ಊರುಗಳಿಗೆ ತೆರಳಲು ಜನರು ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದತ್ತ ಧಾವಿಸುತ್ತಿದ್ದಾರೆ. ಈ ಹಿನ್ನೆಲೆ ಮೆಜೆಸ್ಟಿಕ್ ನಲ್ಲಿ ಜನಸಂದಣಿ ಹೆಚ್ಚಾಗಿದೆ.
ಪ್ರಯಾಣಿಕರ ಸಂಖ್ಯೆ ಹೆಚ್ಚಳ ಹಿನ್ನೆಲೆ ವಿವಿಧ ಜಿಲ್ಲೆಗಳಿಗೆ ತೆರಳಲು ಕೆಎsಸ್ ಆರ್ ಟಿಸಿ ವಿಶೇಷ ಬಸ್ ಗಳ ವ್ಯವಸ್ಥೆ ಮಾಡಿದೆ. ಧಾರವಾಡ, ಶಿವಮೊಗ್ಗ, ದಾವಣಗೆರೆ, ಶೃಂಗೇರಿ, ಕೊಪ್ಪಳ ಸೇರಿದಂತೆ ವಿವಿಧೆಡೆ ತೆರಳಲು ಕೆಎಸ್ ಆರ್ ಟಿಸಿ 200 ಕ್ಕೂ ಹೆಚ್ಚು ಬಿಎಂಟಿಸಿ ಬಸ್ ಗಳ ವ್ಯವಸ್ಥೆ ಮಾಡಿದೆ. ಅಗತ್ಯವಿದ್ದರೆ ಇನ್ನಷ್ಟು ಬಸ್ ಗಳ ವ್ಯವಸ್ಥೆ ಮಾಡುವುದಾಗಿ ಕೆಎಸ್ ಆರ್ ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.