alex Certify ರಾಜ್ಯ ಸರ್ಕಾರದಿಂದ ಗಿಕ್ ಕಾರ್ಮಿಕರಿಗೆ ಸಿಹಿಸುದ್ದಿ : ಡಿ.16 ಕ್ಕೆ ವಿಮೆ ಸೌಲಭ್ಯ ನೋಂದಣಿಗೆ ಚಾಲನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಸರ್ಕಾರದಿಂದ ಗಿಕ್ ಕಾರ್ಮಿಕರಿಗೆ ಸಿಹಿಸುದ್ದಿ : ಡಿ.16 ಕ್ಕೆ ವಿಮೆ ಸೌಲಭ್ಯ ನೋಂದಣಿಗೆ ಚಾಲನೆ

ಧಾರವಾಡ : ಗಿಗ್‌ ಕಾರ್ಮಿಕರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಇಂತಹ ಗಿಗ್ ಕಾರ್ಮಿಕರ ನೋಂದಣಿ ಹಾಗೂ ಗುರುತಿನ ಚೀಟಿ ವಿತರಣೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಡಿಸೆಂಬರ್ 16 ರಂದು ಧಾರವಾಡಕ್ಕೆ ಆಗಮಿಸಿ ಸಂಜೆ ಕಾರ್ಮಿಕ ಇಲಾಖೆ ಆಯೋಜಿಸಿದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಹಿನ್ನೆಲೆಯಲ್ಲಿ ಕೆಸಿಡಿ ಮೈದಾನದಲ್ಲಿ ಸಿದ್ದತಾ ಕಾರ್ಯಗಳು ಭರದಿಂದ ಸಾಗುತ್ತಿದೆ. ಈಗಾಗಲೇ ತ್ರಿಚಕ್ರ ವಾಹನಗಳು ಕೆಸಿಡಿ ಮೈದಾನದಲ್ಲಿ ಇರಿಸಲಾಗಿದ್ದು, ವೇದಿಕೆಯನ್ನು ನಿರ್ಮಿಸಲಾಗುತ್ತಿದೆ.

3 ಲಕ್ಷ ಗಿಗ್ ಕಾರ್ಮಿಕರಿಗೆ ವಿಮೆ ಸೌಲಭ್ಯ

 ಸ್ವಿಗ್ಗಿ, ಜೊಮಾಟೋಗಳಂತಹ ಸಂಸ್ಥೆಗಳಲ್ಲಿ ಫುಡ್‍ಡೆಲಿವರಿ ಮಾಡುವ ಹಾಗೂ ಇ-ಕಾಮರ್ಸ್ ಸಂಸ್ಥೆಗಳಾದ ಅಮೆಜಾನ್, ಪ್ಲಿಫ್‍ಕಾರ್ಟ್, ಬಿಗ್‍ಬಾಸ್ಕೆಟ್, ಪೋರ್ಟರ್, ಫಾರ್ಮಸಿ, ಬ್ಲಿಂಕಿಟ್, ಜೆಪ್ಟೋ, ಬಿಗ್ ಬಾಸ್ಕೆಟ್, ಡಾಮಿನೋಜ್ ನಂತ ಮುಂತಾದ ಸಂಸ್ಥೆಗಳಲ್ಲಿ  ಡೆಲಿವರಿ ವೃತ್ತಿಯಲ್ಲಿ ತೊಡಗಿಕೊಂಡ ಎಲ್ಲಾ ಅಸಂಘಟಿತ ಗಿಗ್ ಕಾರ್ಮಿಕರಿಗೂ ಸರ್ಕಾರ ವಿಮೆ ಘೋಷಿಸಿದೆ. ವಿವಿಧ ಕಂಪನಿಗಳ ಡಿಲೇವರಿ ಕಾರ್ಮಿಕರಾಗಿ ಕೆಲಸ ಮಾಡುವ ಗಿಗ್ ಕಾರ್ಮಿಕರಿಗೆ 2 ಲಕ್ಷ ಅಪಘಾತ ವಿಮೆ ಹಾಗೂ 2 ಲಕ್ಷ ಜೀವವಿಮೆಯನ್ನು ಸರ್ಕಾರವು  ಇತ್ತಿಚಿಗೆ ಘೋಷಿಸಿದ್ದು, ಇಂತಹ ಗಿಗ್ ಕಾರ್ಮಿಕರ ನೋಂದಣಿ ಹಾಗೂ ಗುರುತಿನ ಚೀಟಿ ವಿತರಣೆಯ ಕಾರ್ಯಕ್ರಮವು ಈ ವೇದಿಕೆಯಲ್ಲಿ ಜರುಗಲಿವೆ.

 ಪೂರ್ಣಕಾಲಿಕ, ಅರೆಕಾಲಿಕ ಡೆಲಿವರಿ ನೌಕರರಾಗಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರ ಸಂಖ್ಯೆ ರಾಜ್ಯದಲ್ಲಿ ಸುಮಾರು 3 ಲಕ್ಷದಷ್ಟು ಇದ್ದಾರೆ. ಈ ಕಾರ್ಮಿಕರು ಅಸಂಘಟಿತ ಕಾರ್ಮಿಕ ವಲಯಕ್ಕೆ ಸೇರಿದ್ದು, ಕಾರ್ಮಿಕ ಕಾನೂನುಗಳಡಿ ನಿಗದಿಪಡಿಸಿರುವ ಸಾಮಾಜಿಕ ಭದ್ರತಾ ಸೌಲಭ್ಯಗಳಿಂದ ವಂಚಿತರಾಗಿರುತ್ತಾರೆ. ಅಪಘಾತದಿಂದ ಮರಣ, ಸಂಪೂರ್ಣ ಶಾಶ್ವತ ದುರ್ಬಲತೆ ಹೊಂದಿದ್ದಲ್ಲಿ ಅವರು ಹಾಗೂ ಅವರ ಅವಲಂಬಿತರು ಆರ್ಥಿಕ ಸಂಕಷ್ಟಕ್ಕೆ ಒಳಗಾಗುತ್ತಾರೆ. ಅಂತಹ ಸಂದರ್ಭದಲ್ಲಿ ಗಿಗ್ ಕಾರ್ಮಿಕರು, ಅವರ ಅವಲಂಬಿತರಿಗೆ ಸಾಮಾಜಿಕ ಭದ್ರತೆ ಒದಗಿಸುವುದು ಸರ್ಕಾರದ ಹೊಣೆಗಾರಿಕೆಯಾಗಿದ್ದು, ಸೂಕ್ತ ವಿಮಾ ಸೌಲಭ್ಯ ಒದಗಿಸುವ ಮೂಲಕ ಸಂಕಷ್ಟದಿಂದ ಮುಕ್ತಗೊಳಿಸಲು ಉದ್ದೇಶಿಸಲಾಗಿದೆ.

45 ಸಾವಿರ ಪತ್ರಿಕಾ ವಿತರಕರಿಗೆ ವಿಮಾ ಯೋಜನೆ ಸೌಲಭ್ಯ: ಅಸಂಘಟಿತ ವಲಯದ ವ್ಯಾಪ್ತಿಯಲ್ಲಿ ಬರುವ ದಿನಪತ್ರಿಕೆ ವಿತರಿಸುವ ಕಾರ್ಮಿಕರು ಅರೆಕಾಲಿಕ ವೃತ್ತಿ ನಿರ್ವಹಿಸುತ್ತಿದ್ದು, ಪ್ರತಿನಿತ್ಯ ಸಾರ್ವಜನಿಕರ ಮನೆ ಬಾಗಿಲಿಗೆ ಪತ್ರಿಕೆಗಳನ್ನು ವಿತರಿಸುತ್ತಾರೆ. ರಾಜ್ಯದಲ್ಲಿ ಸುಮಾರು 45 ಸಾವಿರ ಪತ್ರಿಕಾ ವಿತರಕರಿಗೆ ಈ ವಿಮಾ ಯೋಜನೆ ಉಪಯೋಗವಾಗಲಿದೆ. ಸದರಿ ಕಾರ್ಮಿಕರಲ್ಲಿ ಬಹುತೇಕರು ದಿನಪತ್ರಿಕೆ ವಿತರಿಸಲು ದ್ವಿಚಕ್ರ ವಾಹನಗಳನ್ನು ಬಳಸುತ್ತಿದ್ದು, ಅಪಘಾತಕ್ಕೊಳಗಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಸದರಿ ಕಾರ್ಮಿಕರಿಗೆ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ವಿತರಿಸುವ ಮೂಲಕ ಸಾಮಾಜಿಕ ಭದ್ರತೆ ಒದಗಿಸುವುದು ಯೋಜನೆಯ ಉದ್ದೇಶವಾಗಿರುತ್ತದೆ. ಸದರಿ ಯೋಜನೆಗೆ ಸಹ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ. ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ವಿವಿಧ ಸಹಾಯ ಸೌಲಭ್ಯಗಳ ಮಂಜೂರಾತಿ ಆದೇಶವನ್ನು ಮುಖ್ಯಮಂತ್ರಿಗಳು ವಿತರಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...