ಬೆಂಗಳೂರು : ವಿದ್ಯಾರ್ಥಿನಿಯರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಿಹಿಸುದ್ದಿ ನೀಡಿದ್ದು, ಶುಚಿ ಯೋಜನೆಯಡಿ ಪ್ರಾಯೋಗಿಕವಾಗಿ ಜಾರಿಗೊಳಿಸಿದ್ದ ಮುಟ್ಟಿಕಪ್ ವಿತರಣೆ ಕಾರ್ಯಕ್ರಮ ಎರಡು ಜಿಲ್ಲೆಗಳಿಗೆ ವಿಸ್ತರಿಸಲಾಗಿದೆ.
ಶುಚಿ ಯೋಜನೆಯಡಿ ರಾಜ್ಯ ಆರೋಗ್ಯ ಇಲಾಖೆಯು ಮುಟ್ಟಿನ ಕಪ್ ಬಳಕೆ ಕುರಿತು ಅರಿವು ಮೂಡಿಸಲು ಯಳಂದೂರು ಮತ್ತು ಪುತ್ತೂರು ತಾಲೂಕುಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೆ ತರಲಾಗಿತ್ತು. ಇದೀಗ ಈ ಕಾರ್ಯಕ್ರಮ ಯಶಸ್ವಿಯಾದ ಬೆನ್ನಲ್ಲೇ ಚಾಮರಾಜನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಈ ಯೋಜನೆಯನ್ನು ವಿಸ್ತರಿಸಲಾಗಿದೆ. ಈ ಯೋಜನೆಯಡಿ 15 ಸಾವಿರ ವಿದ್ಯಾರ್ಥಿನಿಯರಿಗೆ ಸೌಲಭ್ಯ ದೊರೆಯಲಿದೆ.
ರಾಜ್ಯದಲ್ಲಿ ಶುಚಿ ಯೋಜನೆಯಡಿ 19 ಲಕ್ಷಕ್ಕೂ ಅಧಿಕ ವಿದ್ಯಾರ್ಥಿನಿಯರು ಸ್ಯಾನಿಟರಿ ಪ್ಯಾಡ್ ಗಳ ಫಲಾನುಭವಿಗಳಾಗಿದ್ದಾರೆ. ಪ್ರತಿವರ್ಷ ಪ್ರತಿ ಫಲಾನುಭವಿಗೆ ತಲಾ 10 ಪ್ಯಾಡ್ ಗಳ 12 ಪ್ಯಾಕ್ ಗಳನ್ನು ಉಚಿತವಾಗಿ ನೀಡುತ್ತಿದೆ.